AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಉಷಾ, ತಮ್ಮ ಡಿಕೆ ಸುರೇಶ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಡಿಕೆ ಶಿವಕುಮಾರ್: ಶೀಘ್ರ ಉಭಯ ನಾಯಕರು ದೆಹಲಿಗೆ

ಪತ್ನಿ ಉಷಾ, ತಮ್ಮ ಡಿಕೆ ಸುರೇಶ್ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಡಿಕೆ ಶಿವಕುಮಾರ್: ಶೀಘ್ರ ಉಭಯ ನಾಯಕರು ದೆಹಲಿಗೆ

ಪ್ರಸನ್ನ ಗಾಂವ್ಕರ್​
| Edited By: |

Updated on: Jul 03, 2026 | 11:53 AM

Share

ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಸಚಿವರ ಎರಡನೇ ಪಟ್ಟಿ ಮತ್ತು ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ತೊಡಕು ಆಗದಂತೆ ಉಭಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಇಬ್ಬರೂ ನಾಯಕರು ಶೀಘ್ರದಲ್ಲೇ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಕೆಶಿ ಜತೆ ಪತ್ನಿ ಉಷಾ, ಸಹೋದರ ಡಿಕೆ ಸುರೇಶ್ ಸಹ ಇದ್ದರು.

ಬೆಂಗಳೂರು, ಜುಲೈ 3: ಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಕನಕಪುರಕ್ಕೆ ತೆರಳುವ ಮುನ್ನ ಈ ಭೇಟಿ ನಡೆದಿದ್ದು, ಉಭಯ ನಾಯಕರು ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿದರು. ಪತ್ನಿ ಉಷಾ, ಸಹೋದರ ಡಿಕೆ ಸುರೇಶ್ ಜತೆ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ ಡಿಕೆಶಿ ಉಪಾಹಾರ ಮಾಜಿ ಸಿಎಂ ಜತೆ ಉಪಾಹಾರ ಸೇವಿಸಿದರು.

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಸಂಪುಟ ವಿಸ್ತರಣೆಯಲ್ಲಿ ಯಾವುದೇ ತೊಡಕುಗಳು ಉಂಟಾಗಬಾರದು ಎಂಬ ನಿಟ್ಟಿನಲ್ಲಿ ಈ ಚರ್ಚೆಗಳು ನಡೆದಿವೆ. ಎರಡನೇ ಹಂತದ ಸಚಿವರ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಯ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗಿದೆ. ಈ ವಿಚಾರವಾಗಿ ಹೈಕಮಾಂಡ್ ಜತೆ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದಾರೆ. ಈ ದೆಹಲಿ ಪ್ರವಾಸಕ್ಕೂ ಮುನ್ನ ಉಭಯ ನಾಯಕರು ಪರಸ್ಪರ ಭೇಟಿಯಾಗಿ ಕುಶಲೋಪರಿ ವಿಚಾರಿಸಿ, ಸಚಿವ ಸಂಪುಟ ರಚನೆ ಸಂಬಂಧ ಪ್ರಾಥಮಿಕ ಚರ್ಚೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More