ಆಶಾ ಕಾರ್ಯಕರ್ತೆಯರಿಗೆ ಡಿಕೆ ಶಿವಕುಮಾರ್ ಗುಡ್‌ನ್ಯೂಸ್: ಸಿಎಂ ಸಂಧಾನ ಸಕ್ಸಸ್
ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ.
ಬೆಂಗಳೂರು, ನವೆಂಬರ್ 28: ಸಿಎಂ ಡಿ.ಕೆ ಶಿವಕುಮಾರ್ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ. ಇನ್ನು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರು ಹೋರಾಟ ಮಾಡಿದ್ರು. ಅವರಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಿದ್ದೇವೆ. ಜೊತೆಗೆ ಅವರ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹಧನ ಸಿಗಲಿದೆ. ಆಶಾ ಕಾರ್ಯಕರ್ತೆಯರಿಗೆ ಜನವರಿಗೆ 1ರಿಂದ ಹೆಚ್ಚುವರಿ 2,000 ರೂ. ಸಿಗಲಿದ್ದು, ಇನ್ನುಳಿದ ಹೆಚ್ಚುವರಿ 2,000 ರೂ. ಬಗ್ಗೆ ಮುಂದಿನ ಬಜೆಟ್ನಲ್ಲಿ ಘೋಷಿಸುತ್ತೇವೆ ಎಂದು ಭರವಸೆ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

