ಆಶಾ ಕಾರ್ಯಕರ್ತೆಯರಿಗೆ ಡಿಕೆ ಶಿವಕುಮಾರ್ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌

ಆಶಾ ಕಾರ್ಯಕರ್ತೆಯರಿಗೆ ಡಿಕೆ ಶಿವಕುಮಾರ್ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌

Updated on: Nov 28, 2026 | 6:42 PM

ಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ.

ಬೆಂಗಳೂರು, ನವೆಂಬರ್ 28: ಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಆಶಾ ಕಾರ್ಯಕರ್ತೆಯರ ನಡುವಿನ ಸಂಧಾನ ಸಭೆ ಯಶಸ್ವಿಯಾಗಿದೆ. 2,000 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡುವ ಸಿಎಂ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಕೊಂಡಿದ್ದಾರೆ. ಇದರೊಂದಿಗೆ ಆಶಾ ಕಾರ್ಯಕರ್ತೆಯರು ಕಳೆದ 12 ದಿನಗಳಿಂದ ನಡೆಸುತ್ತಿದ್ದ ಧರಣಿ ಕೊನೆಗೂ ಅಂತ್ಯವಾಗಿದೆ. ಇನ್ನು ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರು ಹೋರಾಟ ಮಾಡಿದ್ರು. ಅವರಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಿದ್ದೇವೆ. ಜೊತೆಗೆ ಅವರ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹಧನ ಸಿಗಲಿದೆ. ಆಶಾ ಕಾರ್ಯಕರ್ತೆಯರಿಗೆ ಜನವರಿಗೆ 1ರಿಂದ ಹೆಚ್ಚುವರಿ 2,000 ರೂ. ಸಿಗಲಿದ್ದು, ಇನ್ನುಳಿದ ಹೆಚ್ಚುವರಿ 2,000 ರೂ. ಬಗ್ಗೆ ಮುಂದಿನ ಬಜೆಟ್​ನಲ್ಲಿ ಘೋಷಿಸುತ್ತೇವೆ ಎಂದು ಭರವಸೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 28, 2026 06:41 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More