ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆ ಶಿವಕುಮಾರ್

Updated on: Oct 06, 2026 | 2:49 PM

ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ವೀರಶೈವ ಸ್ವಾಮೀಜಿ ಅವರ ಕಾರ್ಯಕ್ರಮಕ್ಕೆ ಹೋಗಿದ್ದೆ. ವೀರಶೈವ ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ. ನಾನು ಹೇಳಿದ್ದು ಮತದಾರರಿಗೆ ಹೊರತು ಸ್ವಾಮೀಜಿಗಳಿಗಲ್ಲ. ಯಾವ ಸ್ವಾಮೀಜಿಗಳಿಗೂ ಅಗೌರವದಿಂದ ನಡೆದುಕೊಂಡಿಲ್ಲ. ನಾನು ಸ್ವಾಮೀಜಿಗಳಿಗೆ ಕೊಡುವಷ್ಟು ಗೌರವ ಇನ್ಯಾರಿಗೂ ಕೊಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಅಕ್ಟೊಬರ್ 06): ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಡಿದ ಮಾತುಗಳು ಆಕ್ರೋಶಕ್ಕೆ ಕಾರಣವಾಗಿದೆ. ಮೂರು ಸಾವಿರ ಮಠ ಇದ್ಯೋ ಆರು ಸಾವಿರ ಮಠ ಇದ್ಯೋ “ನೀವೆಲ್ಲ ನನ್ನ ರಾಯಭಾರಿಗಳಾಗಿ ಸೇವೆ ಮಾಡಿ ಮುಕ್ತಿ ಪಡೆಯಿರಿ, ಆವಾಗಷ್ಟೇ ನಿಮಗೆ ಶಾಂತಿ ನಿಮ್ಮ ಅಭಿವೃದ್ಧಿ ಎಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ. ಈ ಸಂಬಂಧ ವೀರಶೈವ ಲಿಂಗಾಯತ ಸಮುದಾಯ ಆಕ್ರೋಶ ವ್ಯಕ್ತಪಡಿಸಿದ್ದು Veerashaiva Lingayath Official ಪೇಜ್ ಸಿಎಂ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇನ್ನು ಇದಕ್ಕೆ ಸ್ವತಃ ಇದೀಗ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ವೀರಶೈವ ಸ್ವಾಮೀಜಿ ಅವರ ಕಾರ್ಯಕ್ರಮಕ್ಕೆ ಹೋಗಿದ್ದೆ. ವೀರಶೈವ ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ. ನಾನು ಹೇಳಿದ್ದು ಮತದಾರರಿಗೆ ಹೊರತು ಸ್ವಾಮೀಜಿಗಳಿಗಲ್ಲ. ಯಾವ ಸ್ವಾಮೀಜಿಗಳಿಗೂ ಅಗೌರವದಿಂದ ನಡೆದುಕೊಂಡಿಲ್ಲ. ನಾನು ಸ್ವಾಮೀಜಿಗಳಿಗೆ ಕೊಡುವಷ್ಟು ಗೌರವ ಇನ್ಯಾರಿಗೂ ಕೊಡಲ್ಲ. ಮಾನವ ಧರ್ಮಕ್ಕೆ ಜಯವಾಗಲಿ ಎನ್ನುವವನು ನಾನು. ಎಲ್ಲಾ ಜಾತಿಗಳು ಒಂದೇ ಎಂದು ಹೇಳುವವನು ನಾನು. ನನ್ನ ಹೇಳಿಕೆಯನ್ನು ತಿರುಚಿ ಮದ ಮದ ಎನ್ನುತ್ತಿದ್ದಾರೆ. ಡಿಕೆಶಿ ಅವರಿಗೆ ಮದ ಬಂದಿದೆ ಅಂತಾರೆ, ಮದ ಇದ್ದರೆ‌ ಇಳಿಸಲಿ ಎಂದು ಸ್ಪಷ್ಟನೆ ನೀಡುವ ಮೂಲಕ ಟೀಕಿಗೆಗಳಿಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More