AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆ ಶಿವಕುಮಾರ್ ಸ್ಪಷ್ಟನೆ: ಅಂತೆ ಕಂತೆಗಳಿಗೆ ತೆರೆ

ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆ ಶಿವಕುಮಾರ್ ಸ್ಪಷ್ಟನೆ: ಅಂತೆ ಕಂತೆಗಳಿಗೆ ತೆರೆ

ಪ್ರಶಾಂತ್​ ಬಿ.
| Edited By: |

Updated on:Sep 14, 2026 | 2:08 PM

Share

ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್​ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಬಿ.ಕೆ.ಹರಿಪ್ರಸಾದ್​​ಗೆ ಆಹ್ವಾನ ನೀಡಿಲ್ಲ ಅಂತಾ ಯಾರು ಹೇಳಿದ್ದು? ಪಕ್ಷದ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, (ಸೆಪ್ಟೆಂಬರ್ 14): ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೊನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅದ್ಧೂರಿಯಾಗಿ ಶತಕದ ಸಂಭ್ರಮವನ್ನು ಆಚರಿಸಲಾಗಿದ್ದು, ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಆಹ್ವಾನ ನೀಡಿದಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಂಬಂಧ ಇದಕ್ಕೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್​ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಬಿ.ಕೆ.ಹರಿಪ್ರಸಾದ್​​ಗೆ ಆಹ್ವಾನ ನೀಡಿಲ್ಲ ಅಂತಾ ಯಾರು ಹೇಳಿದ್ದು? ಪಕ್ಷದ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 14, 2026 12:50 PM

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More