ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆ ಶಿವಕುಮಾರ್ ಸ್ಪಷ್ಟನೆ: ಅಂತೆ ಕಂತೆಗಳಿಗೆ ತೆರೆ
ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಬಿ.ಕೆ.ಹರಿಪ್ರಸಾದ್ಗೆ ಆಹ್ವಾನ ನೀಡಿಲ್ಲ ಅಂತಾ ಯಾರು ಹೇಳಿದ್ದು? ಪಕ್ಷದ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು, (ಸೆಪ್ಟೆಂಬರ್ 14): ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೊನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅದ್ಧೂರಿಯಾಗಿ ಶತಕದ ಸಂಭ್ರಮವನ್ನು ಆಚರಿಸಲಾಗಿದ್ದು, ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಆಹ್ವಾನ ನೀಡಿದಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಂಬಂಧ ಇದಕ್ಕೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಬಿ.ಕೆ.ಹರಿಪ್ರಸಾದ್ಗೆ ಆಹ್ವಾನ ನೀಡಿಲ್ಲ ಅಂತಾ ಯಾರು ಹೇಳಿದ್ದು? ಪಕ್ಷದ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 14, 2026 12:50 PM
Loading...
Unable to load recommendations.
Follow Us
