ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ.ಕೆ. ಶಿವಕುಮಾರ್

Edited By:

Updated on: Sep 04, 2026 | 3:51 PM

ಸಿಎಂ ಡಿ.ಕೆ. ಶಿವಕುಮಾರ್ ಅವರು ಬಾಗಲಕೋಟೆ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ವಿಧಾನಸಭೆ ಉಪಸಭಾಧ್ಯಕ್ಷ ಮಂಕಾಳು ವೈದ್ಯ ಹಾಗೂ ರಾಜ್ಯಸಭಾ ಸದಸ್ಯ ಡಾ.ಜಿ.ಸಿ.ಚಂದ್ರಶೇಖರ್ ಸಹ ಈ ವೇಳೆ ಉಪಸ್ಥಿತರಿದ್ದರು. ಮಳೆ ಇಲ್ಲದೆ ಎಷ್ಟು ಬೆಳೆ ಹಾನಿಯಾಗಿದೆ, ಜಮೀನುಗಳ ಪರಿಸ್ಥಿತಿ ಹೇಗಿದೆ ಮತ್ತು ರೈತರ ಸ್ಥಿತಿಗತಿಗಳನ್ನು ಅವರು ವೀಕ್ಷಿಸಿದರು.

ಬಾಗಲಕೋಟೆ, ಸೆಪ್ಟೆಂಬರ್​​ 04: ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಬಾಗಲಕೋಟೆ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿನ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ವೈಮಾನಿಕ ಸಮೀಕ್ಷೆಯಲ್ಲಿ ವಿಧಾನ ಸಭೆ ಉಪಸಭಾಧ್ಯಕ್ಷ ಮಂಕಾಳು ವೈದ್ಯ ಹಾಗೂ ರಾಜ್ಯಸಭಾ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್ ಸಹ ಭಾಗವಹಿಸಿದ್ದರು. ಮಳೆ ಇಲ್ಲದೆ ಎಷ್ಟು ಬೆಳೆ ಹಾನಿಯಾಗಿದೆ, ಜಮೀನುಗಳ ಪರಿಸ್ಥಿತಿ ಹೇಗಿದೆ ಮತ್ತು ರೈತರ ಸ್ಥಿತಿಗತಿಗಳನ್ನು ಅವರು ವೀಕ್ಷಿಸಿದರು. ಸಮೀಕ್ಷೆಯ ಬಳಿಕ ಮಾತನಾಡಿದ ಸಿಎಂ, ರಾಜ್ಯದಲ್ಲಿ ಎಲ್ಲೂ ಉತ್ತಮ ಬೆಳೆ ಆಗಿಲ್ಲ ಎಂದು ತಿಳಿಸಿದರು. ಬರ ಘೋಷಣೆ ಪ್ರಕ್ರಿಯೆ ಇನ್ನೂ ನಡೆಯುತ್ತಿದ್ದು, ಇದರ ಬಗ್ಗೆ ವರದಿ ತರಿಸಿಕೊಂಡಿದ್ದೇನೆ ಎಂದವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us