ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆಶಿ ಮಾಹಿತಿ
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ನಿಜವಾದ ಫಲಾನುಭವಿಗಳನ್ನು ಗುರುತಿಸಲು ಹಾಗೂ ದುರ್ಬಳಕೆ ತಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮರು ಅರ್ಜಿ ಸಲ್ಲಿಸಲು ಆದೇಶಿಸಿದ್ದಾರೆ. ನಾವು ಯೋಜನೆಗಳನ್ನು ನಿಲ್ಲಿಸುತ್ತಿಲ್ಲ. ಆದರೆ ಅವುಗಳ ದುರ್ಬಳಕೆ ಆಗಬಾರದು ಎಂಬ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿರೋದಾಗಿ ಅವರು ತಿಳಿಸಿದ್ದಾರೆ.
ಬೆಂಗಳೂರು, ಜೂನ್ 14: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನಿಜವಾದ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ನೂರಾರು ಕೋಟಿ ರೂಪಾಯಿ ಈಗಾಗಲೇ ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ, ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ 1.64 ಲಕ್ಷ ಜನರೂ ಸಹ ಮರು ಅರ್ಜಿ ಸಲ್ಲಿಸಬೇಕು ಎಂದೂ ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್

