AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆ ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆ ಶಿವಕುಮಾರ್

ರಮೇಶ್ ಬಿ. ಜವಳಗೇರಾ
|

Updated on: Jun 10, 2026 | 8:36 PM

Share

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ ಈ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕೆಲವರು ಸಾವನ್ನಪ್ಪಿದ್ದು, ಆದರೂ ಗೃಹಲಕ್ಷ್ಮಿ ಹಣ ಯಾರಿಗೋ ಹೋಗುತ್ತಿದ್ದು, ಇದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಹೊಸದಾಗಿ ಐಡೆಂಟಿ ಆಗಬೇಕಿದೆ. ಮರುಪರಿಶೀಲನೆ ಮಾಡ್ತಾವಿದಿವಿ ಅಷ್ಟೇ. ಯಾರಿಗೆ ಸಿಗಬೇಕು ಅದು ಸಿಗಲಿ ಎಂದು ಸ್ಪಷ್ಟಪಡಿಸಿದರು.

ನವದೆಹಲಿ, (ಜೂನ್ 10): ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ. ಪ್ರಸ್ತುತ ಇಡೀ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮೂವತ್ತು ಲಕ್ಷಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಈ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಪಡೆಯುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದಿರುವ ಕೆಲವು ಗಂಭೀರ ಲೋಪದೋಷಗಳು ಹಾಗೂ ನಕಲಿ ಅರ್ಹತೆಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕಲು ಸರ್ಕಾರವು ಇನ್ಮುಂದೆ ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲು ಕಠಿಣ ನಿರ್ಧಾರ ಕೈಗೊಂಡಿದೆ.

ಈ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕೆಲವರು ಸಾವನ್ನಪ್ಪಿದ್ದು, ಆದರೂ ಗೃಹಲಕ್ಷ್ಮಿ ಹಣ ಯಾರಿಗೋ ಹೋಗುತ್ತಿದ್ದು, ಇದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಹೊಸದಾಗಿ ಐಡೆಂಟಿ ಆಗಬೇಕಿದೆ. ಮರುಪರಿಶೀಲನೆ ಮಾಡ್ತಾವಿದಿವಿ ಅಷ್ಟೇ. ಯಾರಿಗೆ ಸಿಗಬೇಕು ಅದು ಸಿಗಲಿ ಎಂದು ಸ್ಪಷ್ಟಪಡಿಸಿದರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More