ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಸಿಎಂ ಡಿಕೆಶಿ

Edited By:

Updated on: Nov 03, 2026 | 10:50 PM

ಇಂದು (ನವೆಂಬರ್ 03) ಸಿಎಂ ಡಿಕೆ ಶಿವಕುಮಾರ್ ಹಿರಿಯೂರು ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿಯ ಸುಳಿವು ನೀಡಿದ್ದಾರೆ. ಹೌದು...ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಇಂದು ಗೆಳೆಯ ಸುಧಾಕರ್ ಇದ್ದಿದ್ರೆ ಸಂಭ್ರಮಾಚರಣೆ ಮಾಡಬಹುದಿತ್ತು. ನೀವು ಸುಹಾಸ್​​ ಅವರನ್ನು ಅತೀ ಹೆಚ್ಚು ಮತ ಕೊಟ್ಟು ಆಯ್ಕೆ ಮಾಡ್ತೀರಿ ಎಂದು ಹೇಳಿದ್ದಾರೆ. ಈ ಮೂಲಕ ಮುಂಬರುವ ಉಪಚುನಾವಣೆ ಟಿಕೆಟ್ ಡಿ ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಖಚಿತವಾದಂತಾಗಿದೆ.

ಚಿತ್ರದುರ್ಗ, ನವೆಂಬರ್ 03): ರಾಜ್ಯ ರಾಜಕೀಯದಲ್ಲಿ ಇದೀಗ ಹಿರಿಯೂರು ಉಪಚುನಾವಣೆ ಚರ್ಚೆ ಆರಂಭವಾಗಿದೆ.  ಡಿ ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಮೂರು ಪಕ್ಷಗಳು ತೆರೆಮೆರೆಯ ಕಸರತ್ತು ಆರಂಭಿಸಿವೇ. ರಾಜ್ಯದಲ್ಲಿ ಇತ್ತೀಚಿಗೆ ನಡೆದ ವಿಧಾನ ಪರಿಷತ್ ಗೆಲುವಿನ ಜೋಶ್ ನಲ್ಲಿರುವ ರಾಜ್ಯ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರು ಹಿರಿಯೂರು ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟು ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಇದರ ನಡುವೆ ಜೆಡಿಎಸ್ ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಿ ಗೆಲ್ಲಿಸಲು ಉಪಚುನಾವಣೆ ಘೋಷಣೆಗೂ ಮುನ್ನವೇ ಚುನಾವಣಾ ಕೆಲಸ ಆರಂಭಿಸಿದೆ. ಅಷ್ಟೇ ಅಲ್ಲದೆ ಈಗಾಗಲೇ ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಹಿರಿಯೂರು ಉಪಚುನಾವಣೆ ಸಂಬಂಧ ಪ್ರಾಥಮಿಕ ಮಾತುಕತೆ ನಡೆಸಿರುವ ಕುಮಾರಸ್ವಾಮಿ ಹಿರಿಯೂರು ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧೆಗೆ ಮನವಿ ಮಾಡಿದ್ದಾರೆ.

ಇನ್ನು ಕಾಂಗ್ರೆಸ್ ಕೂಡ ಹಿರಿಯೂರಿನಲ್ಲಿ ಗೆಲುವಿನ ಬಾವುಟ ಹಾರಿಸಲು ತೆರೆಮರೆಯ ದಸರತ್ತು ಈಗಾಗಲೇ ಆರಂಭಿಸಿದೆ.ಅದರಂತೆ ದಿ.ಮಾಜಿ ಸಚಿವ ಡಿ ಸುಧಾಕರ್ ಪುತ್ರನೇ ಹಿರಿಯೂರು ಬೈ ಎಲೆಕ್ಷನ್ ಅಲ್ಲಿ ಕಣಕ್ಕಿಳಿಯುವಂತ ಸಾಧ್ಯತೆ ದಟ್ಟವಾಗಿದೆ.ಇದರ ನಡುವೆ ಇಂದು (ನವೆಂಬರ್ 03) ಸಿಎಂ ಡಿಕೆ ಶಿವಕುಮಾರ್ ಹಿರಿಯೂರು ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿಯ ಸುಳಿವು ನೀಡಿದ್ದಾರೆ. ಹೌದು…ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಇಂದು ಗೆಳೆಯ ಸುಧಾಕರ್ ಇದ್ದಿದ್ರೆ ಸಂಭ್ರಮಾಚರಣೆ ಮಾಡಬಹುದಿತ್ತು. ನೀವು ಸುಹಾಸ್​​ ಅವರನ್ನು ಅತೀ ಹೆಚ್ಚು ಮತ ಕೊಟ್ಟು ಆಯ್ಕೆ ಮಾಡ್ತೀರಿ ಎಂದು ಹೇಳಿದ್ದಾರೆ. ಈ ಮೂಲಕ ಮುಂಬರುವ ಉಪಚುನಾವಣೆ ಟಿಕೆಟ್ ಡಿ ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಖಚಿತವಾದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 03, 2026 10:49 PM
Loading...
Unable to load recommendations.
Follow Us
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More