AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಿದ ಡಿಕೆ ಶಿವಕುಮಾರ್, ರೌಡಿ ನಿಗ್ರಹ ತಂಡ ರಚನೆಗೆ ಆದೇಶ

ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಿದ ಡಿಕೆ ಶಿವಕುಮಾರ್, ರೌಡಿ ನಿಗ್ರಹ ತಂಡ ರಚನೆಗೆ ಆದೇಶ

ರಮೇಶ್ ಬಿ. ಜವಳಗೇರಾ
|

Updated on:Jun 04, 2026 | 3:59 PM

Share

ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪಗಳು ಕೇಳಿಬರುತ್ತಿವೆ. ಪುಡಿ ರೌಡಿಗಳ ಅಟ್ಟಹಾಸ, ಡ್ರಗ್ಸ್, ಗಾಂಜಾ, ಜೂಜಾಟ, ಅಕ್ರಮ ಮರಳು ದಂಧೆ, ಮಟ್ಕಾ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಿತ್ತಿವೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕೊಲೆ, ಸುಲಿಗೆ, ಡ್ರಗ್ಸ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದೀಗ ಇವುಗಳಿಗೆ ಕಡಿವಾಣ ಹಾಕಲು ನೂತನ ಸಿಎಂ ಡಿಕೆ ಶಿವಕುಮಾರ್  (DK Shivakumar) ಸಮರ ಸಾರಿದ್ದಾರೆ.

ಬೆಂಗಳೂರು, (ಜೂನ್ 04): ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪಗಳು ಕೇಳಿಬರುತ್ತಿವೆ. ಪುಡಿ ರೌಡಿಗಳ ಅಟ್ಟಹಾಸ, ಡ್ರಗ್ಸ್, ಗಾಂಜಾ, ಜೂಜಾಟ, ಅಕ್ರಮ ಮರಳು ದಂಧೆ, ಮಟ್ಕಾ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಿತ್ತಿವೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕೊಲೆ, ಸುಲಿಗೆ, ಡ್ರಗ್ಸ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದೀಗ ಇವುಗಳಿಗೆ ಕಡಿವಾಣ ಹಾಕಲು ನೂತನ ಸಿಎಂ ಡಿಕೆ ಶಿವಕುಮಾರ್  (DK Shivakumar) ಸಮರ ಸಾರಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 04) ವಿಧಾನಸೌಧದಲ್ಲಿ ನಡೆದ ಮೊದಲ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ರೌಡಿ ನಿಗ್ರಹಕ್ಕೆ ವಿಶೇಷ ತಂಡಗಳ ರಚನೆಗೆ ಆದೇಶಿಸಿದ್ದಾರೆ. ರಾಜ್ಯದ ಪ್ರತಿ ತಾಲೂಕಿನಲ್ಲಿ ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಮತ್ತು ಅವರನ್ನು ಮಟ್ಟಹಾಕಲು ವಿಶೇಷ ಸ್ಕ್ವಾಡ್‌ಗಳನ್ನು ಸ್ಥಾಪಿಸಬೇಕೆಂದು ಹೇಳಿದ್ದೇನೆ. ಈ ತಂಡಗಳು 10 ರಿಂದ 15 ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ಒಳಗೊಂಡಿರುತ್ತವೆ. ಹಳೆಯ ರೌಡಿಗಳು ಮತ್ತು ಹೊಸದಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಯುವಕರ ಮೇಲೆ ನಿಗಾ ಇಡುವುದು, ಅವರನ್ನು ಪತ್ತೆಹಚ್ಚಿ ದಾರಿಗೆ ತರುವುದು ಮತ್ತು ಯಾವುದೇ ಕ್ರಿಮಿನಲ್ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳುವುದು ಈ ತಂಡಗಳ ಪ್ರಮುಖ ಜವಾಬ್ದಾರಿಯಾಗಿದೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ಮತ್ತು ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಲು ಸಹಕಾರಿಯಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ, ಅಧಿಕಾರಿಗಳಿಗೆ ಕೊಟ್ಟ ಖಡಕ್ ಸೂಚನೆಗಳೇನು?

Published on: Jun 04, 2026 03:58 PM

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More