ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ: ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​

Edited By:

Updated on: Jun 04, 2026 | 3:21 PM

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದೆ, ಪಾರದರ್ಶಕವಾಗಿ, ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡಲು ಸೂಚಿಸಲಾಗಿದೆ. ಸಾರ್ವಜನಿಕ ಕುಂದುಕೊರತೆಗಳ ನಿವಾರಣೆ, ಸಿಎಸ್ಆರ್ ನಿಧಿಗಳ ಸದ್ಬಳಕೆ ಮತ್ತು ಶಿಕ್ಷಣಕ್ಕೆ ಒತ್ತು ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೊಸ ನೀತಿಗಳನ್ನು ಪ್ರಕಟಿಸಲು ನಿರ್ಧರಿಸಲಾಗಿದೆ.

ಬೆಂಗಳೂರು, ಜೂನ್​ 04: ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar)​ ನಿನ್ನೆ ಆರು ಪ್ರಮುಖ ನಿರ್ಧಾರಗಳನ್ನು ಘೋಷಣೆ ಮಾಡಿದ್ದರು. ಆ ಬೆನ್ನಲ್ಲೇ ಇಂದು ಅಧಿಕಾರಿಗಳ ಸಭೆ ಮಾಡುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಒತ್ತಡಕ್ಕೆ ಮಣಿಯದೆ ಜನರ ಕೆಲಸ ಮಾಡಬೇಕು. ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ನಮ್ಮ ಸರ್ಕಾರದಲ್ಲಿ ಜಾತಿ, ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ, ಒತ್ತಡಕ್ಕೆ ಮಣಿಯದೆ ಕೆಲಸ ಮಾಡಿ. ನಮ್ಮ ಶಾಸಕರು, ಸಚಿವರು ಸೇರಿದಂತೆ ಯಾವುದೇ ಒತ್ತಡ ಬಂದರೂ ಅದಕ್ಕೆ ಮಣಿಯದೆ ಕೆಲಸ ಮಾಡುವಂತೆ ಸೂಚಿಸಲಾಗಿದೆ. ಜನರಿಗೆ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕು. ತಾಲೂಕು, ಗ್ರಾಮಗಳಿಗೆ ತೆರಳಿ ಅಧಿಕಾರಿಗಳು ಕೆಲಸ ಮಾಡಬೇಕು. ಎಲ್ಲಾ ಇಲಾಖೆಗಳ ಬಾಕಿ ಕೆಲಸದ ಪಟ್ಟಿ ನೀಡಬೇಕು. ಬಾಕಿ ಕೆಲಸದ ಪಟ್ಟಿಯನ್ನು 25 ದಿನದೊಳಗೆ ಪಟ್ಟಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More