AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ದೆಹಲಿಗೆ: ಖಾಲಿ ಇರುವ ಎರಡು ಸಚಿವ ಸ್ಥಾನ ಭರ್ತಿಗೆ ಕೂಡಿಬಂತು ಕಾಲ

ಡಿಕೆಶಿ ದೆಹಲಿಗೆ: ಖಾಲಿ ಇರುವ ಎರಡು ಸಚಿವ ಸ್ಥಾನ ಭರ್ತಿಗೆ ಕೂಡಿಬಂತು ಕಾಲ

ರಮೇಶ್ ಬಿ. ಜವಳಗೇರಾ
|

Updated on: Nov 27, 2026 | 8:31 PM

Share

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಹೌದು..ನಾಳೆ (ನವೆಂಬರ್ 28) ಮಧ್ಯಾಹ್ನ ಡಿಕೆ ಶಿವಕುಮಾರ್​ ದೆಹಲಿಗೆ ತೆರಳುವ ಸಾಧ್ಯತೆಗಳಿವೆ. ಇದಕ್ಕೂ ಮುನ್ನ ಡಿಕೆ ಶಿವಕುಮಾರ್, ಸಂಪುಟದಲ್ಲಿ ಉಳಿದಿರುವ 2 ಸ್ಥಾನ ಭರ್ತಿ ಸಂಬಂಧ ಇಂದು (ನವೆಂಬರ್ 27) ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೆವಾಲ ಜೊತೆ ಚರ್ಚಿಸಿದ್ದಾರೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳುವ ಸಾಧ್ಯತೆಗಳಿದ್ದು, ಬಾಕಿ ಉಳಿದಿರುವುದು 2 ಸಚಿವ ಸ್ಥಾನ ಭರ್ತಿ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು, (ನವೆಂಬರ್ 27): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಹೌದು..ನಾಳೆ (ನವೆಂಬರ್ 28) ಮಧ್ಯಾಹ್ನ ಡಿಕೆ ಶಿವಕುಮಾರ್​ ದೆಹಲಿಗೆ ತೆರಳುವ ಸಾಧ್ಯತೆಗಳಿವೆ. ಇದಕ್ಕೂ ಮುನ್ನ ಡಿಕೆ ಶಿವಕುಮಾರ್, ಸಂಪುಟದಲ್ಲಿ ಉಳಿದಿರುವ 2 ಸ್ಥಾನ ಭರ್ತಿ ಸಂಬಂಧ ಇಂದು (ನವೆಂಬರ್ 27) ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೆವಾಲ ಜೊತೆ ಚರ್ಚಿಸಿದ್ದಾರೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳುವ ಸಾಧ್ಯತೆಗಳಿದ್ದು, ಬಾಕಿ ಉಳಿದಿರುವುದು 2 ಸಚಿವ ಸ್ಥಾನ ಭರ್ತಿ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಅದರಲ್ಲೂ ಪ್ರಮುಖವಾಗಿ ಸಂಪುಟದಲ್ಲಿ ಮಹಿಳೆಯರು ಇಲ್ಲ. ಈ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಚಳಿಗಾಲದ ಅಧಿವೇಶನ ಬೇರೆ ಇದೆ. ಹೀಗಾಗಿ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ಮುನ್ನ ಡಿಕೆಶಿ, ಎರಡೂ ಸ್ಥಾನವನ್ನು ಭರ್ತಿ ಮಾಡುವ ಕಸರತ್ತು ನಡೆಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ಯಾರಿಗೆ ಮಣೆ ಹಾಕೆಂಬ ತೀರ್ಮಾನ ಕೈಗೊಳ್ಳಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More