ಡಿಕೆಶಿ ದೆಹಲಿಗೆ: ಖಾಲಿ ಇರುವ ಎರಡು ಸಚಿವ ಸ್ಥಾನ ಭರ್ತಿಗೆ ಕೂಡಿಬಂತು ಕಾಲ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಹೌದು..ನಾಳೆ (ನವೆಂಬರ್ 28) ಮಧ್ಯಾಹ್ನ ಡಿಕೆ ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆಗಳಿವೆ. ಇದಕ್ಕೂ ಮುನ್ನ ಡಿಕೆ ಶಿವಕುಮಾರ್, ಸಂಪುಟದಲ್ಲಿ ಉಳಿದಿರುವ 2 ಸ್ಥಾನ ಭರ್ತಿ ಸಂಬಂಧ ಇಂದು (ನವೆಂಬರ್ 27) ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೆವಾಲ ಜೊತೆ ಚರ್ಚಿಸಿದ್ದಾರೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳುವ ಸಾಧ್ಯತೆಗಳಿದ್ದು, ಬಾಕಿ ಉಳಿದಿರುವುದು 2 ಸಚಿವ ಸ್ಥಾನ ಭರ್ತಿ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು, (ನವೆಂಬರ್ 27): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಹೌದು..ನಾಳೆ (ನವೆಂಬರ್ 28) ಮಧ್ಯಾಹ್ನ ಡಿಕೆ ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆಗಳಿವೆ. ಇದಕ್ಕೂ ಮುನ್ನ ಡಿಕೆ ಶಿವಕುಮಾರ್, ಸಂಪುಟದಲ್ಲಿ ಉಳಿದಿರುವ 2 ಸ್ಥಾನ ಭರ್ತಿ ಸಂಬಂಧ ಇಂದು (ನವೆಂಬರ್ 27) ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೆವಾಲ ಜೊತೆ ಚರ್ಚಿಸಿದ್ದಾರೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳುವ ಸಾಧ್ಯತೆಗಳಿದ್ದು, ಬಾಕಿ ಉಳಿದಿರುವುದು 2 ಸಚಿವ ಸ್ಥಾನ ಭರ್ತಿ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಅದರಲ್ಲೂ ಪ್ರಮುಖವಾಗಿ ಸಂಪುಟದಲ್ಲಿ ಮಹಿಳೆಯರು ಇಲ್ಲ. ಈ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಚಳಿಗಾಲದ ಅಧಿವೇಶನ ಬೇರೆ ಇದೆ. ಹೀಗಾಗಿ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ಮುನ್ನ ಡಿಕೆಶಿ, ಎರಡೂ ಸ್ಥಾನವನ್ನು ಭರ್ತಿ ಮಾಡುವ ಕಸರತ್ತು ನಡೆಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿ ಯಾರಿಗೆ ಮಣೆ ಹಾಕೆಂಬ ತೀರ್ಮಾನ ಕೈಗೊಳ್ಳಲಿದ್ದಾರೆ.
