ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

Updated on: Jun 23, 2026 | 7:11 AM

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿಯಾದರು. ಸಚಿವ ಎನ್. ಚಲುವರಾಯಸ್ವಾಮಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇತ್ತೀಚಿನ ಬೆಳವಣಿಗೆಗಳ ಕುರಿತು ಗಣ್ಯರು ಹಾಗೂ ಸ್ವಾಮೀಜಿಗಳ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು, ಜೂನ್ 23: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸೋಮವಾರ ರಾತ್ರಿ ಭೇಟಿಯಾದರು. ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ರವಿ ಗಣಿಗ ಸಹ ಸಿಎಂ ಅವರೊಂದಿಗೆ ಸ್ವಾಮೀಜಿಗಳ ಭೇಟಿಯಾದರು. ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಸಿಎಂ ಜೊತೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಅಷ್ಟೆ ಎಂದು ರವಿ ಗಣಿಗ ಹೇಳಿದ್ದಾರೆ. ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿತ್ತು. ಅದಕ್ಕಾಗಿ ಸಿಎಂ ಜೊತೆ ಬಂದು ಶ್ರೀಗಳನ್ನು ಭೇಟಿಯಾದೆವು ಅಷ್ಟೆ. ಅದು ಬಿಟ್ಟು ಯಾವುದೇ ರಾಜಕೀಯ ಮಾತನಾಡಿಲ್ಲ ಎಂದು ಚಲುವರಾಯಸ್ವಾಮಿ ಸಹ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More