ಪೌರ ಕಾರ್ಮಿಕರ ದಿನಾಚರಣೆ: ಸಮವಸ್ತ್ರ ಧರಿಸಿ ಸ್ವಚ್ಛತಾ ಯೋಧರಿಗೆ ಗೌರವ ಸಲ್ಲಿಸಿದ ಡಿಕೆ ಶಿವಕುಮಾರ್

Updated on: Sep 25, 2026 | 4:01 PM

ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ನಡೆದ 'ಸ್ವಚ್ಛತಾ ಯೋಧರಿಗೆ ನಲ್ಮೆಯ ನಮನ' ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಸಮವಸ್ತ್ರ ಧರಿಸಿ ಗೌರವ ಸಲ್ಲಿಸಿದರು. ಪೌರ ಕಾರ್ಮಿಕರ ಸೇವೆ ದೇಶಕ್ಕೆ ಮಹತ್ವದ್ದು ಎಂದು ಹೇಳಿದ ಸಿಎಂ, ತಮ್ಮ ಕೆಲಸದ ಬಗ್ಗೆ ಸ್ವಾಭಿಮಾನ ಹೊಂದಲು ಕರೆ ನೀಡಿದರು.

ಬೆಂಗಳೂರು, ಸೆಪ್ಟೆಂಬರ್​​​ 25: ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಸ್ವಚ್ಛತಾ ಯೋಧರಿಗೆ ನಲ್ಮೆಯ ನಮನ’ ಬೃಹತ್ ಕಾರ್ಯಕ್ರಮ ನಡೆಯಿತು. ಈ ವೇಳೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಪೌರ ಕಾರ್ಮಿಕರ ಸಮವಸ್ತ್ರ ಧರಿಸಿ ಭಾಗವಹಿಸಿದ್ದು ವಿಶೇಷವಾಗಿತ್ತು. ಬಳಿಕ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿದರು. ಡಿಕೆ ಶಿವಕುಮಾರ್​​ರೊಂದಿಗೆ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಬಾಲಕೃಷ್ಣ ಬಸವಂತಪ್ಪ ಹಾಗೂ ಮುನಿಯಪ್ಪ ಅವರೂ ಸಹ ಪೌರ ಕಾರ್ಮಿಕರ ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More