AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಲ್​ ವಿಡಿಯೋ: ಯಶವಂತಪುರ ಮಾರುಕಟ್ಟೆಯಲ್ಲಿ ವೇಯಿಂಗ್ ಮಷಿನ್ ಏರಿ ಖುದ್ದು ತೂಕ ನೋಡಿದ ಸಿಎಂ ಡಿಕೆ ಶಿವಕುಮಾರ್​

ವೈರಲ್​ ವಿಡಿಯೋ: ಯಶವಂತಪುರ ಮಾರುಕಟ್ಟೆಯಲ್ಲಿ ವೇಯಿಂಗ್ ಮಷಿನ್ ಏರಿ ಖುದ್ದು ತೂಕ ನೋಡಿದ ಸಿಎಂ ಡಿಕೆ ಶಿವಕುಮಾರ್​

ಶಿವಪ್ರಸಾದ್​ ಬಿ.
| Edited By: |

Updated on: Sep 08, 2026 | 12:20 PM

Share

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿದರು. ಈರುಳ್ಳಿ ಮಾರುಕಟ್ಟೆಯಲ್ಲಿ ತೂಕದ ಮೋಸದ ಬಗ್ಗೆ ರೈತರು ಮತ್ತು ವರ್ತಕರೊಂದಿಗೆ ಚರ್ಚಿಸಿದರು. ಸ್ವತಃ ತೂಕದ ಯಂತ್ರದ ಮೇಲೆ ನಿಂತು ಅದರ ನಿಖರತೆಯನ್ನು ಪರಿಶೀಲಿಸಿದರು. ಇದೇ ವೇಳೆ ಎಪಿಎಂಸಿ ಅಕ್ರಮದ ಬಗ್ಗೆ ಮಾಜಿ ಸದಸ್ಯ ಅರುಣ್ ಪರಮೇಶ್ವರ್​​ ಸಿಎಂಗೆ ದೂರು ನೀಡಿದ್ದು, ಮೂಲಸೌಕರ್ಯ ವಿಚಾರದಲ್ಲಿ ಎಪಿಎಂಸಿ ಅವ್ಯವಸ್ಥೆ ಗೂಡಾಗಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 08: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೂಕದಲ್ಲಿ ಮೋಸ ನಡೆಯುತ್ತಿದೆ ಎಂಬ ದೂರುಗಳ ಬಗ್ಗೆ ವಿಚಾರಿಸಿದ್ದಾರೆ. ಮಾಹಿತಿ ಸಂಗ್ರಹಿಸುವ ಜೊತೆಗೆ, ಸ್ವತಃ ತಾವೇ ತೂಕದ ಯಂತ್ರದ ಮೇಲೆ ನಿಂತು ಅದರ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ಎಪಿಎಂಸಿ ಅಕ್ರಮದ ಬಗ್ಗೆ ಮಾಜಿ ಸದಸ್ಯ ಅರುಣ್ ಪರಮೇಶ್ವರ್​​ ಸಿಎಂಗೆ ದೂರು ನೀಡಿದ್ದು, ಮೂಲಸೌಕರ್ಯ ವಿಚಾರದಲ್ಲಿ ಎಪಿಎಂಸಿ ಅವ್ಯವಸ್ಥೆ ಗೂಡಾಗಿದೆ. ರೈತರು 20 ರೂ. ಕೊಟ್ಟು ನೀರು ಕುಡಿಯಬೇಕು. ಹಿಂದಿನ ಅಧಿಕಾರಿಗಳು ಲೂಟಿ ಮಾಡಿದ್ದಾರೆ ಎಂದವರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More