ಪ್ರಧಾನಿ ಮೋದಿ ಎದುರು ಸಾಲು ಸಾಲು ಬೇಡಿಕೆಯಿಟ್ಟ ಸಿಎಂ ಡಿ.ಕೆ. ಶಿವಕುಮಾರ್​​: ಇಲ್ಲಿದೆ ಮಾಹಿತಿ

Updated on: Nov 13, 2026 | 3:00 PM

ಬೆಂಗಳೂರಿನ ಐಐಎಂಬಿ ಆಡಿಟೋರಿಯಂನಲ್ಲಿ ನಡೆದ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ಮೋದಿ ಎದುರು ಬರ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ನಮ್ಮ ಮೆಟ್ರೋ ಕೆಂಪು ಮಾರ್ಗಕ್ಕೆ ಶೀಘ್ರ ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು, ನವೆಂಬರ್​​ 13: ಐಐಎಂಬಿ ಆಡಿಟೋರಿಯಂನಲ್ಲಿ ನಡೆದ 15,600 ಕೋಟಿಗೂ ಹೆಚ್ಚು ಮೊತ್ತದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಪ್ರಧಾನಿ ನರೇಂದ್ರ ಮೋದಿ ಬಳಿ ಸಾಲು ಸಾಲು ಬೇಡಿಕೆಗಳನ್ನಿಟ್ಟಿದ್ದಾರೆ. ಭಾಷಣದಲ್ಲಿ ಬರ ಪರಿಹಾರ ಬಗ್ಗೆ ಪ್ರಸ್ತಾಪಿಸಿದ ಸಿಎಂ, ತೀವ್ರ ಬರಗಾಲದಿಂದ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದು, ಸುಮಾರು  62 ಸಾವಿರ ಕೋಟಿ ರೂ. ನಷ್ಟವಾಗಿದೆ. ಹೀಗಾಗಿ ಎನ್​ಡಿಆರ್​ಎಫ್​ ನಿಧಿಯಡಿ ಬರ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಕಬ್ಬ ಬೆಳೆಗಾರರ ಸಮಸ್ಯೆ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಈ ವಿಚಾರದಲ್ಲಿಯೂ ಸಹಕಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಬೆಂಗಳೂರಿನ ಸಮಗ್ರ ಪ್ರಗತಿಗೆ ಮೆಟ್ರೋ ಕೆಂಪು ಮಾರ್ಗ ಅನಿವಾರ್ಯವಾಗಿದ್ದು, ಇದಕ್ಕೆ ಶೀಘ್ರ ಅನುಮತಿ ನೀಡುವಂತೆಯೂ ಅವರು ಕೋರಿದ್ದಾರೆ. ಮೆಟ್ರೋ ಯೋಜನೆಗಳಿಗೆ ರಾಜ್ಯವೇ ಹೆಚ್ಚು ವೆಚ್ಚ ಭರಿಸುತ್ತಿದೆ ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Nov 13, 2026 02:59 PM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More