AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆ ಶಿವಕುಮಾರ್ ಸೂಕ್ಷ್ಮ ಪ್ರತಿಕ್ರಿಯೆ ಹೀಗಿದೆ

ಎಚ್​​​ಕೆ ಪಾಟೀಲ್ ರಾಜೀನಾಮೆ ಎಚ್ಚರಿಕೆಗೆ ಡಿಕೆ ಶಿವಕುಮಾರ್ ಸೂಕ್ಷ್ಮ ಪ್ರತಿಕ್ರಿಯೆ ಹೀಗಿದೆ

ರಮೇಶ್ ಬಿ. ಜವಳಗೇರಾ
|

Updated on: Sep 22, 2026 | 5:07 PM

Share

ಅಕ್ಟೋಬರ್ 10ರೊಳಗಾಗಿ ಸರಕಾರ ಗದಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ್ ಅವರು ಎಚ್ಚರಿಕೆ ನೀಡಿದ್ದು, ಕಾಂಗ್ರೆಸ್​​ನಲ್ಲಿ ಸಂಚಲಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 22): ಅಕ್ಟೋಬರ್ 10ರೊಳಗಾಗಿ ಸರಕಾರ ಗದಗ ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಸಚಿವ, ಶಾಸಕ ಎಚ್.ಕೆ. ಪಾಟೀಲ್ ಅವರು ಎಚ್ಚರಿಕೆ ನೀಡಿದ್ದು, ಕಾಂಗ್ರೆಸ್​​ನಲ್ಲಿ ಸಂಚಲಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಗದಗ ಜಿಲ್ಲೆಯ ಪ್ರವಾಸ ಮಾಡಿದ್ದೇನೆ. ನನ್ನ ಜೊತೆ ಪಾಟೀಲರು ಇದ್ದರು. ಅವರು ಹೇಳಿದ್ದು ಸತ್ಯ. ಮಲೆನಾಡಿನಲ್ಲೇ ಬರ ಬಂದಿದೆ ಎಂದರೆ, ಗದಗದಲ್ಲಿ ಬರ ಇರುವುದಿಲ್ಲವೇ, ಜಿಲ್ಲೆಯ ಸಮಸ್ಯೆಯ ಅರಿವು ನನಗಿದೆ. ಈಗಾಗಲೇ 124 ತಾಲೂಕುಗಳು ಬರ ಘೋಷಣೆಯಾಗಿದೆ. 200 ತಾಲೂಕು ಘೋಷಣೆಯಾಗುವ ಸಾಧ್ಯ ಇದೆ. ಈ ಬಗ್ಗೆ ಅಗತ್ಯ ವರದಿಗಳು ಬರುತ್ತಿವೆ ಎಂದು ಹೇಳಿದರು. ಈ ಮೂಲಕ ಗದಗ ತಾಲೂಕವನ್ನು ಬರ ಪೀಡಿತ ಎಂದು ಘೋಷಿಸುವ ಸುಳಿವು ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us