ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಒತ್ತು: ರಾಜ್ಯ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಹಣ ಬಿಡುಗಡೆ
ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆ ನಡೆಸಿರುವ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ, ಸಿಎಂ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16 ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. 2 ಪ್ರತ್ಯೇಕ ಅಧಿಸೂಚನೆಯಲ್ಲಿ ಈ ಬಗ್ಗೆ ಘೋಷಿಸಲಾಗಿದೆ.
ಬೆಂಗಳೂರು, ನವೆಂಬರ್ 18: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಸಿಎಂ ಡಿಕೆ ಶಿವಕುಮಾರ್, ಅಭಿವೃದ್ಧಿ ಮೂಲಕ ಜನರನ್ನು ಸೆಳೆಯಲು ಮುಂದಾಗಿದ್ದಾರೆ. ರಾಜ್ಯದಲ್ಲಿ ರಸ್ತೆ, ಚರಂಡಿ, ಮೂಲಸೌಕರ್ಯಕ್ಕೆ ಸಿಎಂ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ರಾಜ್ಯ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಹಣ ಬಿಡುಗಡೆ ಮಾಡಲಾಗಿದೆ. 2 ಪ್ರತ್ಯೇಕ ಅಧಿಸೂಚನೆಯಲ್ಲಿ ಒಟ್ಟು 16 ಸಾವಿರ ಕೋಟಿ ರಿಲೀಸ್ ಮಾಡಲಾಗಿದ್ದು, ನಿನ್ನೆ ಬೆಳಗ್ಗೆ 6 ಸಾವಿರ ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಇನ್ನೊಂದು ಅಧಿಸೂಚನೆಯಲ್ಲಿ 10 ಸಾವಿರ ಕೋಟಿ ಹಣ ನೀಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

