ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಒತ್ತು: ರಾಜ್ಯ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಹಣ ಬಿಡುಗಡೆ

Edited By:

Updated on: Nov 18, 2026 | 11:19 AM

ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆ ನಡೆಸಿರುವ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ, ಸಿಎಂ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16 ಸಾವಿರ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. 2 ಪ್ರತ್ಯೇಕ ಅಧಿಸೂಚನೆಯಲ್ಲಿ ಈ ಬಗ್ಗೆ ಘೋಷಿಸಲಾಗಿದೆ.

ಬೆಂಗಳೂರು, ನವೆಂಬರ್​​ 18: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಸಿಎಂ ಡಿಕೆ ಶಿವಕುಮಾರ್​​, ಅಭಿವೃದ್ಧಿ ಮೂಲಕ ಜನರನ್ನು ಸೆಳೆಯಲು ಮುಂದಾಗಿದ್ದಾರೆ. ರಾಜ್ಯದಲ್ಲಿ ರಸ್ತೆ, ಚರಂಡಿ, ಮೂಲಸೌಕರ್ಯಕ್ಕೆ ಸಿಎಂ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ರಾಜ್ಯ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಹಣ ಬಿಡುಗಡೆ ಮಾಡಲಾಗಿದೆ. 2 ಪ್ರತ್ಯೇಕ ಅಧಿಸೂಚನೆಯಲ್ಲಿ ಒಟ್ಟು 16 ಸಾವಿರ ಕೋಟಿ ರಿಲೀಸ್​​ ಮಾಡಲಾಗಿದ್ದು, ನಿನ್ನೆ ಬೆಳಗ್ಗೆ 6 ಸಾವಿರ ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು. ಆ ಬಳಿಕ ಇನ್ನೊಂದು ಅಧಿಸೂಚನೆಯಲ್ಲಿ 10 ಸಾವಿರ ಕೋಟಿ ಹಣ ನೀಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More