AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಖಡಕ್ ಕೌಂಟರ್

ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ: ವಿಜಯ್​ಗೆ ಡಿಕೆಶಿ ಖಡಕ್ ಕೌಂಟರ್

ಮಂಜುನಾಥ ಕೆಬಿ
| Edited By: |

Updated on: Nov 08, 2026 | 8:14 PM

Share

ಮುಖ್ಯಾಂಶಗಳು

  • ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಸಿಎಂ ವಿಜಯ್ ಮನವಿ
  • ಹಾಸನದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
  • ಕೇಂದ್ರದ ಒಪ್ಪಿಗೆಗಿಂತ ಸುಪ್ರೀಂಕೋರ್ಟ್ ಅನುಮತಿ ಕೊಟ್ಟಿದೆ

ಮೇಕೆದಾಟು ಯೋಜನೆಗೆ ತಮಿಳುನಾಡು ಮುಖ್ಯಮಂತ್ರಿ ಅನುಮತಿ ನಿರಾಕರಿಸಿದ ಪತ್ರಕ್ಕೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಉತ್ತರ ನೀಡಿದ್ದಾರೆ. ಮೇಕೆದಾಟು ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲ ಎಂದ ಅವರು, ಸುಪ್ರೀಂ ಕೋರ್ಟ್ ಈಗಾಗಲೇ ಅನುಮತಿ ನೀಡಿದ್ದು, ತಮಿಳುನಾಡಿನ ಸಹಕಾರ ಮಾತ್ರ ಅಗತ್ಯ ಎಂದು ತಿಳಿಸಿದ್ದಾರೆ.

ಹಾಸನ, ನವೆಂಬರ್​ 08: ಮೇಕೆದಾಟು ಯೋಜನೆಗೆ ಅನುಮತಿ ಪ್ರಧಾನಿ ನರೇಂದ್ರ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ ಬರೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್​, ‘ನಮಗೆ ತಮಿಳುನಾಡು ಅನುಮತಿ ಬೇಡ, ಸಹಕಾರ ಬೇಕಷ್ಟೇ’ ಎಂದಿದ್ದಾರೆ. ಹಾಸನಾಂಬೆ ದರ್ಶನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕೇಂದ್ರದ ಒಪ್ಪಿಗೆಗಿಂತ ಸುಪ್ರೀಂಕೋರ್ಟ್ ಅನುಮತಿ ಕೊಟ್ಟಿದೆ. ಇದು ಕರ್ನಾಟಕದ ಹಕ್ಕು ಎಂದು ಹೇಳಿದೆ. ಪರಿಸರ ಇಲಾಖೆ ಅನುಮತಿ ಬೇಕು, ಅದು ಬಿಟ್ರೆ ಬೇರೆ ಏನಿಲ್ಲ. ಎಲ್ಲ ಪಕ್ಷದವರು, ನಮ್ಮ ಸಂಸದರು ಸಹಕರಿಸ್ತೇವೆ ಅಂದಿದ್ದಾರೆ. ತಮಿಳುನಾಡಿನವರ ಪರಿಶೀಲನಾ ಅರ್ಜಿ ಕೂಡ ತಿರಸ್ಕರಿಸಿದೆ. ತಮಿಳುನಾಡು ಸಿಎಂ ಜೋಸೆಫ್ ವಿಜಯ್​​ ಇದನ್ನ ಗಮನಿಸಬೇಕು’ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More