ನಾನು ಈಗ ವೆಜ್​ಟೇರಿಯನ್, ಅಶೋಕಣ್ಣಂಗೆ ಇಲ್ಲಿಂದಲೇ ಫ್ರೆಶ್ ಮೀನು ಕಳಿಸ್ತೀನಿ: ಅಶೋಕ್ ಟೀಕೆಗೆ ಸಿಎಂ ಡಿಕೆಶಿ ತಿರುಗೇಟು

Edited By:

Updated on: Sep 19, 2026 | 10:48 AM

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರಿನ ಮೀನುಗಾರಿಕೆ ದಕ್ಕೆಗೆ ಬೆಳಿಗ್ಗೆ ಭೇಟಿ ನೀಡಿ, ಡ್ರೆಡ್ಜಿಂಗ್ ಸಮಸ್ಯೆಗಳನ್ನು ಪರಿಶೀಲಿಸಿದರು. ಹೂಳೆತ್ತುವಿಕೆ ಮತ್ತು ಮೂಲಸೌಕರ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ, ವಿಪಕ್ಷ ನಾಯಕ ಆರ್ ಅಶೋಕ ಅವರ ಮೀನು ಊಟ ಟೀಕೆಗೆ ತಿರುಗೇಟು ನೀಡಿದರು.

ಮಂಗಳೂರು, ಸೆಪ್ಟೆಂಬರ್ 19: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಸಚಿವ ಸಂಪುಟ ಸಭೆಯಿಂದ ಕರಾವಳಿ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ. ಇದು, ಸಚಿವರು ಕೇವಲ ಮೀನು ಊಟ ಸವಿಯಲು ಅಲ್ಲಿಗೆ ಹೋಗಿರುವುದು ಎಂಬ ವಿಪಕ್ಷ ನಾಯಕ ಆರ್ ಅಶೋಕ್ ಟೀಕೆಗೆ ಸಿಎಂ ಹಾಸ್ಯಮಯವಾಗಿ ತಿರುಗೇಟು ನೀಡಿದ್ದಾರೆ. ಮಂಗಳೂರಿನ ಬಂದರು ಪ್ರದೇಶಕ್ಕೆ ಶನಿವಾರ ಬೆಳಗ್ಗೆ ಭೇಟಿ ನೀಡಿ ಮೀನುಗಾರರ ಸಮಸ್ಯೆಯನ್ನು ಆಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ಈಗ ನಾನ್ ವೆಜ್ ತಿನ್ನಲ್ಲ. ಅಶೋಕಗೆ ಇಲ್ಲಿಂದಲೇ ತಾಜಾ ಮೀನು ಕಳುಹಿಸಿಕೊಡುತ್ತೇನೆ ಎಂದರು.

ಜತೆಗೆ, ಅಳಿವೆಬಾಗಿಲಿನಲ್ಲಿ ಡ್ರೆಡ್ಜಿಂಗ್ ಸಮಸ್ಯೆಗಳನ್ನು ಪರಿಶೀಲಿಸಿದರು. ಬೋಟ್‌ಗಳು ಹೂಳಿನಲ್ಲಿ ಸಿಲುಕಿ ಬಿದ್ದಿರುವ ಬಗ್ಗೆ ಖಾದರ್ ಮತ್ತು ಮೀನುಗಾರಿಕಾ ಸಂಘಟನೆಗಳ ಸದಸ್ಯರು ವಿವರಿಸಿದ ನಂತರ, ಡ್ರೆಡ್ಜಿಂಗ್‌ನ ಅವಶ್ಯಕತೆಯನ್ನು ಅರಿತುಕೊಂಡ ಸಿಎಂ ಅದಕ್ಕೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು, ರಾಜ್ಯ ಸರ್ಕಾರದಿಂದಲೇ ಸ್ವಂತ ಡ್ರೆಡ್ಜಿಂಗ್ ಯಂತ್ರವನ್ನು ಖರೀದಿಸುವ ಅಥವಾ ಗುತ್ತಿಗೆಗೆ ಪಡೆಯುವ ಕುರಿತು ಸದ್ಯದಲ್ಲೇ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು. ಈ ಹಿಂದೆ ಡ್ರೆಡ್ಜರ್ ಇತ್ತಾದರೂ ಈಗ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More