ಇಂದಿನಿಂದ ಕೇಂದ್ರ ಬರ ಅಧ್ಯಯನ ತಂಡದಿಂದ ರಾಜ್ಯ ಪ್ರವಾಸ; 3705.30 ಕೋಟಿ ರೂ. ಪರಿಹಾರಕ್ಕೆ ಸಿಎಂ ಮನವಿ
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್‌ಸಚಿವಾಲಯ ತಂಡ ಬರ ಅಧ್ಯಯನಕ್ಕೆ ಕರ್ನಾಟಕಕ್ಕೆ ಆಗಮಿಸಿದ್ದು, ಬರ ಅಧ್ಯಯನ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಇಂದು (ಅಕ್ಟೋಬರ್ 03) ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿಕೆ ಶಿಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಡಿಕೆ ಶಿವಕುಮಾರ್ ಅವರು NDRF ಮಾನದಂಡಗಳನ್ವಯ ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು, (ಅಕ್ಟೋಬರ್ 03): ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್‌ಸಚಿವಾಲಯ ತಂಡ ಬರ ಅಧ್ಯಯನಕ್ಕೆ ಕರ್ನಾಟಕಕ್ಕೆ ಆಗಮಿಸಿದ್ದು, ಬರ ಅಧ್ಯಯನ ಪ್ರದೇಶಕ್ಕೆ ಭೇಟಿ ನೀಡುವ ಮುನ್ನ ಇಂದು (ಅಕ್ಟೋಬರ್ 03) ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿಕೆ ಶಿಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ಈ ವೇಳೆ ಡಿಕೆ ಶಿವಕುಮಾರ್ ಅವರು NDRF ಮಾನದಂಡಗಳನ್ವಯ ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಯಾವುದೇ ಒತ್ತಡಗಳಿಗೆ ಜಗ್ಗದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅತ್ಯಂತ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಿ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ. ಬರದಿಂದಾಗಿ ರಾಜ್ಯದಲ್ಲಿ ಅಂದಾಜು 46,324.50 ಕೋಟಿ ರೂಪಾಯಿ ನಷ್ಟವಾಗಿದೆ. ಹೀಗಾಗಿ ರಾಜ್ಯಕ್ಕೆ ನ್ಯಾಯಸಮ್ಮತ ಪರಿಹಾರ ದೊರಕಿಸಿಕೊಡುವಂತೆ ಕೇಳಿಕೊಂಡಿದ್ದಾರೆ.
