ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್

ಮಹೇಶ್ ಇ, ಭೂಮನಹಳ್ಳಿ Edited By:

Updated on: Jun 10, 2026 | 9:13 PM

ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿಯಲ್ಲಿ ರಾಜ್ಯದ ಪ್ರಮುಖ ನೀರಾವರಿ ಮತ್ತು ಆರ್ಥಿಕ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಲ್ಲಿ ಸಹ ಪಾಲ್ಗೊಳ್ಳಲಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಇದು ರಾಜ್ಯದ ಅಭಿವೃದ್ಧಿಗೆ ಸಹಕಾರ ಪಡೆಯುವ ಪ್ರಥಮ ಅಧಿಕೃತ ಭೇಟಿಯಾಗಿದೆ.

ದೆಹಲಿ, ಜೂ.10: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂ.11) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. ಪ್ರಧಾನಮಂತ್ರಿಯವರ ಭೇಟಿಗೆ ಅಧಿಕೃತ ಸಮಯ ಸಿಕ್ಕಿರುವುದನ್ನು ಖಚಿತಪಡಿಸಿರುವ ಸಿಎಂ, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದರು. ಜೊತೆಗೆ ರಾಜ್ಯದ ಅಭಿವೃದ್ಧಿಗೆ ಅಗತ್ಯ ಸಹಕಾರ ಕೊಡುವುದಾಗಿಯೂ ಭರವಸೆ ನೀಡಿದ್ದರು. ನಾಳೆ ಅವರ ಭೇಟಿಗೆ ಸಮಯ ನಿಗದಿಯಾಗಿದ್ದು, ಪ್ರಧಾನಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಹಾಗೂ ಆರ್ಥಿಕ ಯೋಜನೆಗಳ ಕುರಿತು ಮಾತುಕತೆ ನಡೆಸಲಾಗುವುದು” ಎಂದು ಸಿಎಂ ತಿಳಿಸಿದ್ದಾರೆ. ನಾಳೆ ದೆಹಲಿಯಲ್ಲಿ ನಡೆಯಲಿರುವ ‘ನೀತಿ ಆಯೋಗ’ದ (NITI Aayog) ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಇದರೊಂದಿಗೆ ದೆಹಲಿಯಲ್ಲೇ ಇರುವ ಕೆಲವು ಪ್ರಮುಖ ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಹ ಸಿಎಂ ಸಮಯ ಕೋರಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...