ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ಮತ್ತೆ ದಿಲ್ಲಿಯತ್ತ ಡಿಕೆ ಶಿವಕುಮಾರ್
ಸಂಪುಟ ವಿಸ್ತರಣೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರ ಮನವೊಲಿಕೆ ಕಸರತ್ತು ನಡೆದಿದೆ. ಇದರ ಮಧ್ಯೆ ಇದೀಗ ನೂತನ ಸಚಿವರ ಖಾತೆ ಕ್ಯಾತೆ ಶುರುವಾಗಿದೆ. ಮೊದಲು ಮಂತ್ರಿ ಸ್ಥಾನ ಸಿಕ್ಕರೆ ಸಾಕಪ್ಪ ಎನ್ನುತ್ತಿದ್ದವರು ಇದೀಗ ಸಚಿವರಾಗುತ್ತಿದ್ದಂತೆಯೇ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ನೀಡಬೇಕೆಂದು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿಯತ್ತ ಮುಖ ಮಾಡಿದ್ದಾರೆ. ಹೌದು...ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಹೈಕಮಾಂಡ್ ನಾಯಕರ ಚರ್ಚಿಸಲು ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 07) ಅಥವಾ ನಾಳೆ (ಆ.08) ದೆಹಲಿಗೆ ತೆರಳಲಿದ್ದಾರೆ.
ಬೆಂಗಳೂರು, (ಆಗಸ್ಟ್ 07): ಸಂಪುಟ ವಿಸ್ತರಣೆ (Cabinet Expansion) ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress) ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರ ಮನವೊಲಿಕೆ ಕಸರತ್ತು ನಡೆದಿದೆ. ಇದರ ಮಧ್ಯೆ ಇದೀಗ ನೂತನ ಸಚಿವರ ಖಾತೆ ಕ್ಯಾತೆ ಶುರುವಾಗಿದೆ. ಮೊದಲು ಮಂತ್ರಿ ಸ್ಥಾನ ಸಿಕ್ಕರೆ ಸಾಕಪ್ಪ ಎನ್ನುತ್ತಿದ್ದವರು ಇದೀಗ ಸಚಿವರಾಗುತ್ತಿದ್ದಂತೆಯೇ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ನೀಡಬೇಕೆಂದು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿಯತ್ತ ಮುಖ ಮಾಡಿದ್ದಾರೆ. ಹೌದು…ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಹೈಕಮಾಂಡ್ ನಾಯಕರ ಚರ್ಚಿಸಲು ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 07) ಅಥವಾ ನಾಳೆ (ಆ.08) ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ಸಿಗಲಿದ ಎನ್ನುವುದು ಕುತೂಹಲ ಮೂಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್

