ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ಮತ್ತೆ ದಿಲ್ಲಿಯತ್ತ ಡಿಕೆ ಶಿವಕುಮಾರ್

Edited By:

Updated on: Aug 07, 2026 | 3:08 PM

ಸಂಪುಟ ವಿಸ್ತರಣೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​​​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರ ಮನವೊಲಿಕೆ ಕಸರತ್ತು ನಡೆದಿದೆ. ಇದರ ಮಧ್ಯೆ ಇದೀಗ ನೂತನ ಸಚಿವರ ಖಾತೆ ಕ್ಯಾತೆ ಶುರುವಾಗಿದೆ. ಮೊದಲು ಮಂತ್ರಿ ಸ್ಥಾನ ಸಿಕ್ಕರೆ ಸಾಕಪ್ಪ ಎನ್ನುತ್ತಿದ್ದವರು ಇದೀಗ ಸಚಿವರಾಗುತ್ತಿದ್ದಂತೆಯೇ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ನೀಡಬೇಕೆಂದು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿಯತ್ತ ಮುಖ ಮಾಡಿದ್ದಾರೆ. ಹೌದು...ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಹೈಕಮಾಂಡ್ ನಾಯಕರ ಚರ್ಚಿಸಲು ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 07) ಅಥವಾ ನಾಳೆ (ಆ.08) ದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರು, (ಆಗಸ್ಟ್ 07): ಸಂಪುಟ ವಿಸ್ತರಣೆ (Cabinet Expansion)  ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​​​​ನಲ್ಲಿ (Karnataka Congress) ಅಸಮಾಧಾನ ಸ್ಫೋಟಗೊಂಡಿದ್ದು, ಮಂತ್ರಿ ಸ್ಥಾನ ಕೈತಪ್ಪಿದ್ದಕ್ಕೆ ಬೇಸರಗೊಂಡಿರುವ ಶಾಸಕರ ಮನವೊಲಿಕೆ ಕಸರತ್ತು ನಡೆದಿದೆ. ಇದರ ಮಧ್ಯೆ ಇದೀಗ ನೂತನ ಸಚಿವರ ಖಾತೆ ಕ್ಯಾತೆ ಶುರುವಾಗಿದೆ. ಮೊದಲು ಮಂತ್ರಿ ಸ್ಥಾನ ಸಿಕ್ಕರೆ ಸಾಕಪ್ಪ ಎನ್ನುತ್ತಿದ್ದವರು ಇದೀಗ ಸಚಿವರಾಗುತ್ತಿದ್ದಂತೆಯೇ ಇಂತಹದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ನೀಡಬೇಕೆಂದು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಮತ್ತೆ ದೆಹಲಿಯತ್ತ ಮುಖ ಮಾಡಿದ್ದಾರೆ. ಹೌದು…ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಹೈಕಮಾಂಡ್ ನಾಯಕರ ಚರ್ಚಿಸಲು ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 07) ಅಥವಾ ನಾಳೆ (ಆ.08) ದೆಹಲಿಗೆ ತೆರಳಲಿದ್ದಾರೆ. ಹೀಗಾಗಿ ಯಾರಿಗೆ ಯಾವ ಖಾತೆ ಸಿಗಲಿದ ಎನ್ನುವುದು ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More