AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?

ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?

Anil Kalkere
| Edited By: |

Updated on: Aug 26, 2026 | 4:34 PM

Share

ಕರ್ನಾಟಕ ಕಾಂಗ್ರೆಸ್​​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಸಚಿವ ಸಂಪುಟದಲ್ಲಿನ ಸಣ್ಣ ಬದಲಾವಣೆಗಳು ಆಗಲಿವೆ ಎನ್ನುವ ಮಾತುಗಳು ಕೇಳಿಬಂದಿವೆ. ಇದರ ಮಧ್ಯೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರ ನೀಡುವ ಬಗ್ಗೆಯೂ ಚಿಂತನೆಗಳು ನಡೆದಿವೆ. ಹಾಗೇ ಖಾಲಿ ಇರುವ ಮಹಿಳಾ ಕೋಟಾ ಸಚಿವ ಸ್ಥಾನ ಭರ್ತಿ ಬಾಕಿ ಇದೆ. ಹೀಗಾಗಿ ಇವುಗಳ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಲಿದ್ದಾರೆ.

ಬೆಂಗಳೂರು, (ಆಗಸ್ಟ್ 26): ಕರ್ನಾಟಕ ಕಾಂಗ್ರೆಸ್​​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಸಚಿವ ಸಂಪುಟದಲ್ಲಿನ ಸಣ್ಣ ಬದಲಾವಣೆಗಳು ಆಗಲಿವೆ ಎನ್ನುವ ಮಾತುಗಳು ಕೇಳಿಬಂದಿವೆ. ಇದರ ಮಧ್ಯೆ ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿರುವ ಶಾಸಕರಿಗೆ ನಿಗಮ-ಮಂಡಳಿ ಅಧ್ಯಕ್ಷರ ನೀಡುವ ಬಗ್ಗೆಯೂ ಚಿಂತನೆಗಳು ನಡೆದಿವೆ. ಹಾಗೇ ಖಾಲಿ ಇರುವ ಮಹಿಳಾ ಕೋಟಾ ಸಚಿವ ಸ್ಥಾನ ಭರ್ತಿ ಬಾಕಿ ಇದೆ. ಹೀಗಾಗಿ ಇವುಗಳ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಲಿದ್ದಾರೆ.

ಹೌದು… ನಾಳೆ (ಆಗಸ್ಟ್ 27) ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದು, ಕೇಂದ್ರದ ಸಚಿವರ ಭೇಟಿ ಹಾಗೂ ಕಾವೇರಿ ನದಿ ನೀರಿನ ವಿವಾದದ ಸಂಬಂಧ ಸುಪ್ರೀಂ ಕೋರ್ಟ್ ವಕೀಲರೊಂದಿಗೆ ಚರ್ಚೆ ಮಾಡಲುದ್ದಾರೆ. ಬಳಿಕ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸಚಿವ ಬಿ.ನಾಗೇಂದ್ರ ರಾಜೀನಾಮೆ, ಬಾಕಿ ಉಳಿದ ಮಹಿಳಾ ಕೋಟಾ, ಆಕಾಂಕ್ಷಿಗಳಿಗೆ ಸಚಿವ ಸ್ಥಾನ ಸೇರಿ ಹಲವು ವಿಷಯಗಳ ಬಗ್ಗೆ ಹೈಕಮಾಂಡ್ ನಾಯಕರ ಜೊತೆ ಚರ್ಚೆ ಮಾಡಿ ನಾಳೆ ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us