ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

Updated on: Jun 08, 2026 | 10:31 PM

ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೌದು...ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್​​ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು. ಇದನ್ನು ಡಿಕೆ ಶಿವಕುಮಾರ್ ಮುಂದುವರೆಸಿದ್ದು, ಇಂದು (ಜೂನ್ 08) ಮಾಜಿ ಸಿಎಂಗಳಾದ ವೀರಪ್ಪ ಮೊಯ್​ಲಿ, ಡಿವಿ ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸದಾನಂದಗೌಡ ಅವರ ಕುಟುಂಬ ಡಿಕೆ ಶಿವಕುಮಾರ್ ಅವರನ್ನು ಆರತಿ ಬೆಳಗಿ ಮನೆಗೆ ಸ್ವಾಗತಿಸಿರುವುದು ವಿಶೇಷ

ಬೆಂಗಳೂರು, (ಜೂನ್ 08): ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ (DK Shivakumar) ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೌದು…ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು (Karnataka former chief minister) ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್​​ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು. ಇದನ್ನು ಡಿಕೆ ಶಿವಕುಮಾರ್ ಮುಂದುವರೆಸಿದ್ದು, ಇಂದು (ಜೂನ್ 08) ಮಾಜಿ ಸಿಎಂಗಳಾದ ವೀರಪ್ಪ ಮೊಯ್​ಲಿ, ಡಿವಿ ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸದಾನಂದಗೌಡ ಅವರ ಕುಟುಂಬ ಡಿಕೆ ಶಿವಕುಮಾರ್ ಅವರನ್ನು ಆರತಿ ಬೆಳಗಿ ಮನೆಗೆ ಸ್ವಾಗತಿಸಿರುವುದು ವಿಶೇಷ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ರಾಜ್ಯದ ಎಲ್ಲಾ ಮಾಜಿ ಸಿಎಂಗಳ ನಿವಾಸಕ್ಕೂ ಭೇಟಿ ನೀಡುತ್ತೇನೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೂ ಹೋಗುತ್ತೇನೆ. ಕುಮಾರಸ್ವಾಮಿ ಸಮಯ ನೀಡಿದರೆ ಅವರನ್ನೂ ಭೇಟಿ ಮಾಡುತ್ತೇ‌ನೆ. ಮಾಜಿ ಮುಖ್ಯಮಂತ್ರಿಗಳ ಅನುಭವ ಕೇಳಬೇಕಲ್ವಾ? ಎಲ್ಲರ ಅನುಭವ ಮತ್ತು ಮಾರ್ಗದರ್ಶನ ಕೇಳಬೇಕಲ್ವೇ? ಮಾಜಿ ಮುಖ್ಯಮಂತ್ರಿಗಳು ಕೂಡ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಏನು ಗೌರವ ನೀಡಬೇಕೋ ಕೊಡುತ್ತೇನೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More