ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: ಸಿಎಂ ಘೋಷಿಸಿದ 6 ಕೊಡುಗೆಗಳಾವುವು?

Edited By:

Updated on: Jun 03, 2026 | 9:29 PM

ಸಿಎಂ ಡಿಕೆ ಶಿವಕುಮಾರ್ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಹಾಗೂ ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ 2000 ಕೋಟಿ ರೂ. ಮೀಸಲಿಡುವುದಾಗಿ ಘೋಷಿಸಿದ್ದಾರೆ. ಮೂರು ಅಂತಸ್ತಿನ ಮನೆಗಳಿಗೆ ಓಸಿ ವಿನಾಯಿತಿ ಮತ್ತು ಬಿ ಖಾತೆಯಿಂದ ಎ ಖಾತೆ ವಿಸ್ತರಣೆ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಲಾಗಿದೆ.

ಬೆಂಗಳೂರು, ಜೂನ್​ 03: ಪ್ರಮಾಣವಚನ ಸ್ವೀಕರಿಸಿ ಬಳಿಕ ಮೊದಲ ಸಂಪುಟ ಸಭೆ ಮಾಡಿದ ಸಿಎಂ ಡಿಕೆ ಶಿವಕುಮಾರ್​, ಆರು ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಆ ಮೂಲಕ ರಾಜ್ಯದ ಜನತೆಗೆ ಗುಡ್​ ನ್ಯೂಸ್ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಉಚಿತ ಬಸ್ ಪಾಸ್ ನೀಡಲಾಗುವುದು. ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಪಾಸ್ ವ್ಯವಸ್ಥೆ ಜಾರಿಗೆ ಬರಲಿದ್ದು, ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಪಾಸ್ ಪಡೆಯಬೇಕಿದೆ ಎಂದರು. ಇದೇ ವೇಳೆ, ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿ ಮತ್ತು ಡಾಂಬರೀಕರಣಕ್ಕಾಗಿ ಎರಡು ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದ ವತಿಯಿಂದ ತರಬೇತಿ ನೀಡಿ, ಖಾಸಗಿ ಕಂಪನಿಗಳ ಸಹಯೋಗದೊಂದಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಅಲ್ಲದೆ, ಭಾರತ್​​ ಜೋಡೋ ಯುವಕರ ಸಂಘ ಸ್ಥಾಪನೆಗೆ ಚಿಂತನೆ ಮಾಡಲಾಗುತ್ತಿದೆ. ಇನ್ನು ಮೂರು ಅಂತಸ್ತಿನ ಮನೆಗಳಿಗೆ (2500 ಅಡಿವರೆಗೂ) ಓಸಿ ವಿನಾಯಿತಿ ಮತ್ತು ಬಿ ಖಾತೆಯಿಂದ ಎ ಖಾತೆ ಪರಿವರ್ತನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us