ಇಬ್ರಾಹಿಂ ಕಾಂಗ್ರೆಸ್ ಸೇರುವ ಬಗ್ಗೆ ಹೇಳಿಕೆ ನೀಡಿಲ್ಲ, ಅವರು ಈಗಲೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದಾರೆ: ಜಿ ಪರಮೇಶ್ವರ್

|

Updated on: Sep 28, 2023 | 2:14 PM

ಜೆಡಿಎಸ್ ಮತ್ತು ಬಿಜೆಪಿಯಿಂದ ಕಾಂಗ್ರೆಸ್ ಸೇರಲು ಬಯಸಿದವರನ್ನು ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯಲ್ಲೂ ಎರಡು ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದ ಅವರು ತಮ್ಮ ಪಕ್ಷದ ಸಿದ್ಧಾಂತಗಳಿಗೆ ಧಕ್ಕೆಯಾಗದ ಬೇರೆ ಪಕ್ಷಗಳ ಮುಖಂಡರನ್ನು ಸೇರಿಸಿಕೊಳ್ಳುತ್ತೇವೆ ಅಂತ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ (G Parameshwara), ಜೆಡಿಎಸ್ ಮತ್ತು ಬಿಜೆಪಿಯ ನಾಯಕರು ತಮ್ಮ ತಮ್ಮ ಪಕ್ಷಗಳ ಸಿದ್ಧಾಂತಗಳಿಗೆ ಬದ್ಧರಾಗದೆ ಅನುಕೂಲಸಿಂಧು ರಾಜಕಾರಣ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಜೆಡಿಎಸ್ ಮತ್ತು ಬಿಜೆಪಿಯಿಂದ ಕಾಂಗ್ರೆಸ್ ಸೇರಲು ಬಯಸಿದವರನ್ನು ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯಲ್ಲೂ ಎರಡು ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರುವ ಬಯಕೆ ವ್ಯಕ್ತಪಡಿಸಿದ್ದಾರೆ ಎಂದ ಅವರು ತಮ್ಮ ಪಕ್ಷದ ಸಿದ್ಧಾಂತಗಳಿಗೆ ಧಕ್ಕೆಯಾಗದ ಬೇರೆ ಪಕ್ಷಗಳ ಮುಖಂಡರನ್ನು ಸೇರಿಸಿಕೊಳ್ಳುತ್ತೇವೆ ಅಂತ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬೇಸರಗೊಂಡು ಕಾಂಗ್ರೆಸ್ ಸೇರಲು ತವಕಿಸುತ್ತಿರುವ ವದಂತಿ ಬಗ್ಗೆ ಕೇಳಿದಾಗ ಪರಮೇಶ್ವರ್, ಅವರು ಕಾಂಗ್ರೆಸ್ ಸೇರುವ ಕುರಿತು ಮಾತಾಡಿದ್ದು ಗೊತ್ತಿಲ್ಲ, ಅಂಥ ಹೇಳಿಕೆಯೇನೂ ಅವರು ನೀಡಿಲ್ಲ, ಅವರಿನ್ನೂ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ, ಹಾಗಾಗಿ ಕಾಮೆಂಟ್ ಮಾಡೋದು ಸರಿಯಲ್ಲ ಎಂದು ಹೇಳಿದರು. ರಾಜ್ಯ ರಾಜಕಾರಣದಲ್ಲಿ ಏನೆಲ್ಲ ಬದಲಾವಣೆಗಳಾಗಲಿವೆ ಅನ್ನೋದನ್ನು ಕಾದು ನೋಡಬೇಕು ಎಂದು ಗೃಹ ಸಚಿವ ಅಂತ ಯಾವ ಅರ್ಥದಲ್ಲಿ ಹೇಳಿದರೋ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ