ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿದ ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಘೋಷಿಸಿದ ಗೃಹ ಸಚಿವ

Updated on: Aug 03, 2025 | 12:50 PM

ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಈ ಮಹತ್ವದ ತೀರ್ಪು ನೀಡಿದೆ. ಇನ್ನು ಜಡ್ಜ್​ ಗಜಾನನ ಭಟ್ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದು ಹೊಸ ದಾಖಲೆಯಾಗಿದೆ. ಇನ್ನು ಎಸ್​ಐಟಿ ಅವರ ತನಿಖೆಗೆ ಗೃಹ ಸಚಿವ ಪರೇಶ್ವರ್ ಅಭಿನಂದನೆ ತಿಳಿಸಿದ್ದಾರೆ.

ಬೆಂಗಳೂರು, (ಆಗಸ್ಟ್ 03): ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ.ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಈ ಮಹತ್ವದ ತೀರ್ಪು ನೀಡಿದೆ. ಇನ್ನು ಜಡ್ಜ್​ ಗಜಾನನ ಭಟ್ ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ ತೀರ್ಪು ನೀಡಿದ್ದು ಹೊಸ ದಾಖಲೆಯಾಗಿದೆ. ಇನ್ನು ಎಸ್​ಐಟಿ ಅವರ ತನಿಖೆಗೆ ಗೃಹ ಸಚಿವ ಪರೇಶ್ವರ್ ಅಭಿನಂದನೆ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರಕ್ರಿಯಿಸಿದ ಪರಮೇಶ್ವರ್, ಪೊಲೀಸರು ಮೊದಲಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು SITಗೆ ಅಭಿನಂದನೆ ಹೇಳ್ತೇನೆ, ಇದು ಐತಿಹಾಸಿಕ ತೀರ್ಪು. ನ್ಯಾಯಾಲಯಕ್ಕೆ ನಮ್ಮ ಎಸ್ಐಟಿ ಎಲ್ಲಾ ದಾಖಲೆಯನ್ನು ಕೊಟ್ಟಿತ್ತು ಪೊಲೀಸರು ಬೇಗ ತನಿಖೆ ಮುಗಿಸಿದ್ದಾರೆ, ಅಭಿನಂದನೆ ಸಲ್ಲಿಸುತ್ತೇನೆ. ಪ್ರಜ್ವಲ್ ರೇವಣ್ಣ ಕೇಸನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು. ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ಮಾಡುತ್ತೆ. ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More