ಸಿಎಂ ಆಯ್ಕೆಗೆ ಮತದಾನ: ತಮ್ಮ ವೋಟ್ ಬಹಿರಂಗಪಡಿಸಿದ ಕೆಎನ್ ರಾಜಣ್ಣ

ಸಿಎಂ ಆಯ್ಕೆಗೆ ಮತದಾನ: ತಮ್ಮ ವೋಟ್ ಬಹಿರಂಗಪಡಿಸಿದ ಕೆಎನ್ ರಾಜಣ್ಣ

ರಮೇಶ್ ಬಿ. ಜವಳಗೇರಾ
|

Updated on: May 15, 2023 | 9:08 AM

, ಸಿದ್ದರಾಮಯ್ಯ ಸಿಎಂ ಆಗಬೇಕು. ಅವರಿಗೆ ನಾನು ಮತ ಹಾಕಿದ್ದೇನೆ ಎಂದು ಬಹಿರಂಗವಾಗಿಯೇ ಕೇಳಿಕೊಂಡಿದ್ದಾರೆ.

ಬೆಂಗಳೂರು:  ಭಾರಿ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿರುವ ಕಾಂಗ್ರೆಸ್​ನಲ್ಲಿ ಸಿಎಂ ಕುರ್ಚಿ ಫೈಟ್ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ನಡುವೆ ಪೈಪೋಟಿ ನಡೆಯುತ್ತಿದೆ. ಮುಖ್ಯಮಂತ್ರಿ ಆಯ್ಕೆ ಕುರಿತು ಭಾನುವಾರ ಕಾಂಗ್ರೆಸ್​ ಪಕ್ಷ ನಡೆಸಿದ್ದ ಶಾಸಕಾಂಗ ಸಭೆ (CLP meeting) ಅಂತ್ಯಗೊಂಡಿದ್ದು, ಶಾಸಕ ಅಭಿಪ್ರಾಯ ಸಹ ಸಂಗ್ರಹಿಸಲಾಗಿದೆ. ಅಲ್ಲದೇ ನಿಮ್ಮ ಬೆಂಬಲ ಯಾರಿಗೆ ಎನ್ನುವ ಅಭಿಪ್ರಾಯವನ್ನು ಶಾಸಕರ ಬಳಿ ಕೇಳಲಾಗಿದೆ. ಶಾಸಕರು ಗುಪ್ತವಾಗಿ ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಇನ್ನು ಈ ಬಗ್ಗೆ ಶಾಸಕ ಕೆಎನ್​ ರಾಜಣ್ಣ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಸಿಎಂ ಆಗಬೇಕು. ಅವರಿಗೆ ನಾನು ಮತ ಹಾಕಿದ್ದೇನೆ ಎಂದು ಬಹಿರಂಗವಾಗಿಯೇ ಕೇಳಿಕೊಂಡಿದ್ದಾರೆ.