ಸಿಎಂ ಆಯ್ಕೆಗೆ ಮತದಾನ: ತಮ್ಮ ವೋಟ್ ಬಹಿರಂಗಪಡಿಸಿದ ಕೆಎನ್ ರಾಜಣ್ಣ
, ಸಿದ್ದರಾಮಯ್ಯ ಸಿಎಂ ಆಗಬೇಕು. ಅವರಿಗೆ ನಾನು ಮತ ಹಾಕಿದ್ದೇನೆ ಎಂದು ಬಹಿರಂಗವಾಗಿಯೇ ಕೇಳಿಕೊಂಡಿದ್ದಾರೆ.
ಬೆಂಗಳೂರು: ಭಾರಿ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿರುವ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಫೈಟ್ ಶುರುವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ನಡೆಯುತ್ತಿದೆ. ಮುಖ್ಯಮಂತ್ರಿ ಆಯ್ಕೆ ಕುರಿತು ಭಾನುವಾರ ಕಾಂಗ್ರೆಸ್ ಪಕ್ಷ ನಡೆಸಿದ್ದ ಶಾಸಕಾಂಗ ಸಭೆ (CLP meeting) ಅಂತ್ಯಗೊಂಡಿದ್ದು, ಶಾಸಕ ಅಭಿಪ್ರಾಯ ಸಹ ಸಂಗ್ರಹಿಸಲಾಗಿದೆ. ಅಲ್ಲದೇ ನಿಮ್ಮ ಬೆಂಬಲ ಯಾರಿಗೆ ಎನ್ನುವ ಅಭಿಪ್ರಾಯವನ್ನು ಶಾಸಕರ ಬಳಿ ಕೇಳಲಾಗಿದೆ. ಶಾಸಕರು ಗುಪ್ತವಾಗಿ ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಇನ್ನು ಈ ಬಗ್ಗೆ ಶಾಸಕ ಕೆಎನ್ ರಾಜಣ್ಣ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಸಿಎಂ ಆಗಬೇಕು. ಅವರಿಗೆ ನಾನು ಮತ ಹಾಕಿದ್ದೇನೆ ಎಂದು ಬಹಿರಂಗವಾಗಿಯೇ ಕೇಳಿಕೊಂಡಿದ್ದಾರೆ.
Loading...
Unable to load recommendations.
Follow Us