ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!

Updated on: Jun 30, 2026 | 1:06 PM

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲದವರಿಗೆ ಈ ಸೌಲಭ್ಯಗಳನ್ನು ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇತರೆ ರಾಜ್ಯಗಳಾದ ಬಿಹಾರ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತಿರುವುದನ್ನು ಉಲ್ಲೇಖಿಸಿ, ಮತದಾರರಲ್ಲದವರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯವೂ ಪರಿಗಣಿಸಬಹುದು ಎಂದು ಸೂಚಿಸಿದ್ದಾರೆ. ಮತದಾರರು ರಾಜ್ಯದಲ್ಲಿ ವಾಸವಾಗಿದ್ದರೆ ಮಾತ್ರ ಗ್ಯಾರಂಟಿ ಯೋಜನೆಗಳಿಗೆ ಅರ್ಹರಾಗಬೇಕು ಎಂಬುದು ಅವರ ಅಭಿಪ್ರಾಯ. ಒಂದು ವೇಳೆ ಅರ್ಜಿ ಸಲ್ಲಿಸದೆ ಮತದಾನದ ಹಕ್ಕನ್ನು ಕಳೆದುಕೊಂಡರೆ, ಭವಿಷ್ಯದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಯಾವುದೇ ಗ್ಯಾರಂಟಿ ಯೋಜನೆಗಳು ಹಾಗೂ ಪೆನ್ಷನ್ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಮುನ್ನೆಚ್ಚರಿಕೆ ನೀಡಿದ್ದಾರೆ.

ಬೆಂಗಳೂರು, ಜೂನ್ 30: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಚರ್ಚೆ ಮುಂದುವರಿದಿರುವ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲದವರಿಗೆ ಈ ಸೌಲಭ್ಯಗಳನ್ನು ಏಕೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಇತರೆ ರಾಜ್ಯಗಳಾದ ಬಿಹಾರ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತಿರುವುದನ್ನು ಉಲ್ಲೇಖಿಸಿ, ಮತದಾರರಲ್ಲದವರಿಗೆ ಆರ್ಥಿಕ ನೆರವು ನೀಡುವುದನ್ನು ರಾಜ್ಯವೂ ಪರಿಗಣಿಸಬಹುದು ಎಂದು ಸೂಚಿಸಿದ್ದಾರೆ.

ಮತದಾರರು ರಾಜ್ಯದಲ್ಲಿ ವಾಸವಾಗಿದ್ದರೆ ಮಾತ್ರ ಗ್ಯಾರಂಟಿ ಯೋಜನೆಗಳಿಗೆ ಅರ್ಹರಾಗಬೇಕು ಎಂಬುದು ಅವರ ಅಭಿಪ್ರಾಯ. ಒಂದು ವೇಳೆ ಅರ್ಜಿ ಸಲ್ಲಿಸದೆ ಮತದಾನದ ಹಕ್ಕನ್ನು ಕಳೆದುಕೊಂಡರೆ, ಭವಿಷ್ಯದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಯಾವುದೇ ಗ್ಯಾರಂಟಿ ಯೋಜನೆಗಳು ಹಾಗೂ ಪೆನ್ಷನ್ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಮುನ್ನೆಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us