CM Siddaramaiah: ತಮ್ಮ ನಿವಾಸದ ಮುಂದೆ ಜಮಾಯಿಸಿದ್ದ ಜನರ ಅಹವಾಲುಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇವಲ ಉದ್ಯೋಗಾಕಾಂಕ್ಷಿಗಳು ಮಾತ್ರ ಅಲ್ಲ, ವಿವಿಧ ಸಮಸ್ಯೆ ಮತ್ತು ದೂರುಗಳನ್ನು ಸಹ ಜನಸಾಮಾನ್ಯರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ಇಂದಿನ ಅಧಿಕೃತ ದಿನಚರಿಯ ಭಾಗವಾಗಿ ತಮ್ಮ ನಿವಾಸದೆದುರ ಜಮಾಯಿಸಿದ್ದ ಜನರ ಅಹವಾಲುಗಳನ್ನ (grievances) ಸ್ವೀಕರಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (KPTCL) ಕರೆಯಲಾಗಿದ್ದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಉದ್ಯೋಗಾಕಾಂಕ್ಷಿಗಳು ಆರ್ಜಿಗಳ ಮೂಲಕ ಮುಖ್ಯಮಂತ್ರಿಯರಿಗೆ ತಮ್ಮ ಅಳಲು ನಿವೇದನೆ ಮಾಡಿಕೊಂಡರು. ಸಿದ್ದರಾಮಯ್ಯನವರು ಅವರಿಗೆ ಭರವಸೆ ನೀಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಕೇವಲ ಉದ್ಯೋಗಾಕಾಂಕ್ಷಿಗಳು ಮಾತ್ರ ಅಲ್ಲ, ವಿವಿಧ ಸಮಸ್ಯೆ ಮತ್ತು ದೂರುಗಳನ್ನು ಸಹ ಜನಸಾಮಾನ್ಯರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
Latest Videos