ಪ್ರತಾಪ್ ಸಿಂಹ ಟಿಕೆಟ್ ವಂಚಿತರಾಗುವ ಸಾಧ್ಯತೆ ಬಗ್ಗೆ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದು ವಿಷಾದವೋ, ಸಂತಸವೋ?

|

Updated on: Mar 13, 2024 | 2:22 PM

ಸಿದ್ದರಾಮಯ್ಯ ವಿರುದ್ಧ ಮೈಸೂರು ಭಾಗದಲ್ಲಿ ಗಟ್ಟಿಯಾಗಿ ನಿಂತಿರುವುದೇ ತಾನು ಎಂದು ಪ್ರತಾಪ್ ಸಿಂಹ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಅವರು ಯಾವಾಗ ತನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು? ಎಂದು ಮರುಪ್ರಶ್ನೆ ಹಾಕಿದರು. ಜಯಪ್ರಕಾಶ್ ಹೆಗಡೆಯವರು ಕಾಂಗ್ರೆಸ್ ಪಕ್ಷ ಸೇರಿದ್ದು ಕರಾವಳಿ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ತಂದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಉಡುಪಿ: ನಗರದಲ್ಲಿಂದು ಗ್ಯಾರಂಟಿ ಯೋಜನೆ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಲಿ ಸಂಸದ ಪ್ರತಾಪ್ ಸಿಂಹ (Pratap Simha) ಅವರಿಗೆ ಈ ಬಾರಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರೋ ಅಥವಾ ಸಂತಸಪಟ್ಟರೋ ಅನ್ನೋದು ಅವರ ಪ್ರತಿಕ್ರಿಯೆಯಿಂದ ಗೊತ್ತಾಗಲಿಲ್ಲ. ಪಾಪ, ಅವರಿಗೆ ಟಿಕೆಟ್ ತಪ್ಪಿಸಿದ್ದಾರೆ, ಯದುವೀರ್ ಅವರಿಗೆ ಕೊಡ್ತಾರಂತೆ ಅಂತ ಹೇಳಿ ಯಾಕೆ ಟಿಕೆಟ್ ಸಿಗಲಿಲ್ಲ ಅನ್ನೋದು ತನಗೆ ಗೊತ್ತಿಲ್ಲ ಅವರನ್ನೇ ಕೇಳಿ ಎಂದರು. ಕೊಪ್ಪಳ ಸಂಸದ ಕರಡಿ ಸಂಗಣ್ಣ ಅಮರಪ್ಪ (Karadi Sanganna Amarappa) ತಮ್ಮನ್ನು ಭೇಟಿಯಾದ ವದಂತಿಯನ್ನು ಸಿದ್ದರಾಮಯ್ಯ ತಳ್ಳಿಹಾಕಿದರು. ಸಿದ್ದರಾಮಯ್ಯ ವಿರುದ್ಧ ಮೈಸೂರು ಭಾಗದಲ್ಲಿ ಗಟ್ಟಿಯಾಗಿ ನಿಂತಿರುವುದೇ ತಾನು ಎಂದು ಪ್ರತಾಪ್ ಸಿಂಹ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಅವರು ಯಾವಾಗ ತನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು? ಎಂದು ಮರುಪ್ರಶ್ನೆ ಹಾಕಿದರು. ಜಯಪ್ರಕಾಶ್ ಹೆಗಡೆಯವರು ಕಾಂಗ್ರೆಸ್ ಪಕ್ಷ ಸೇರಿದ್ದು ಕರಾವಳಿ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ತಂದಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ಇದನ್ನೂ ಓದಿ:  ಟಿಕೆಟ್ ಸಿಗಲಾರದೆಂಬ ಅತಂಕದಲ್ಲಿರುವ ಸಂಸದ ಪ್ರತಾಪ್ ಸಿಂಹರನ್ನು ಲೇವಡಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!