AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Dec 26, 2025 | 2:21 PM

Share

ಅಧಿಕಾರ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಅವರ ಬಣಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ವಿಷಯ ಹೈಕಮಾಂಡ್​​ ಮಟ್ಟದಲ್ಲೂ ಚರ್ಚೆಯಲ್ಲಿದೆ. ಈ ನಡುವೆಯೂ ಸಿದ್ದರಾಮಯ್ಯ ಮತ್ತು ಡಿಕೆಶಿ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸಿದ್ದಾರೆ.

ದಾವಣಗೆರೆ. ಡಿಸೆಂಬರ್​​ 27: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ದಾವಣಗೆರೆಗೆ ಒಂದೇ ಹೆಲಿಕಾಪ್ಟರ್​ನಲ್ಲಿ ಜಂಟಿಯಾಗಿ ಪ್ರಯಾಣಿಸಿದ್ದಾರೆ. ನಾಯಕರ ಈ ಜಂಟಿ ಪ್ರಯಾಣ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವಾ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್​​ ಮಟ್ಟದಲ್ಲೂ ವಿಷಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಸಿಎಂ ಮತ್ತು ಡಿಸಿಎಂ ನಡೆ ನಾನಾ ರಾಜಕೀಯ ವಿಶ್ಲೇಷಣೆಗೆ ಒಳಗಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.