ಶಾಮನೂರು ಶಿವಶಂಕರಪ್ಪರಿಗೆ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್

| Updated By: ಆಯೇಷಾ ಬಾನು

Updated on: Jul 22, 2023 | 3:09 PM

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ಶಾಮನೂರು ಶಿವಶಂಕರಪ್ಪರಿಗೆ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಮಾಡಿದರು.

ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುತ್ತಿರುವ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಸಚಿವ ಎಂಬಿ ಪಾಟೀಲ್, ಶಾಸಕ ರಿಜ್ವಾನ್​ ಅರ್ಷದ್, ಶಾಮನೂರು ಶಿವಶಂಕರಪ್ಪ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ರು. ಇನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ಶಾಮನೂರು ಶಿವಶಂಕರಪ್ಪರಿಗೆ ಪ್ರಶಸ್ತಿ ವಿತರಿಸಿದರು.

ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹೂಡಿಕೆ ಹೆಚ್ಚಾಗಬೇಕಾದರೆ ಕೈಗಾರಿಕೆಗೆ ಪ್ರೋತ್ಸಾಹ ನೀಡಬೇಕಿದೆ. 68 ಉದ್ಯಮಿಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಮಾಡುತ್ತಿದ್ದೇವೆ. ದೇಶ, ವಿದೇಶಗಳಿಗೆ ರಫ್ತು ಮಾಡಿ ಪ್ರಶಸ್ತಿ ಗಳಿಸೋದು ದೊಡ್ಡ ಸಾಧನೆ. ಕೈಗಾರಿಕೆ ಬೆಳವಣಿಗೆ ಆಗಬೇಕೆಂಬುದು ಸಚಿವ ಎಂ.ಬಿ.ಪಾಟೀಲ್​​ ಆಸೆ. ಎಂ.ಬಿ.ಪಾಟೀಲ್, ಉದ್ಯಮಿಗಳಿಗೆ ಸದಾ ನಮ್ಮ ಬೆಂಬಲ ಇರುತ್ತದೆ. ಈ ಹಿಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯನ್ನು ಪ್ರಾರಂಭ ಮಾಡಿದೆ. ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದೇವೆ. ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ಬಗೆಹರಿಯುತ್ತೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡ ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದರು.