ಇಂದು ರಾಯಚೂರಿಗೆ ಅಗಮಿಸಲಿದ್ದಾರೆ ಸಿದ್ದರಾಮಯ್ಯ, ಶಿವಕುಮಾರ್; ಭದ್ರತೆಗೆ ಬಿಗಿ ಪೊಲೀಸ್ ಬಂದೋಬಸ್ತ್
ಸಿಎಂ, ಡಿಸಿಎಂ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ರಾಯಚೂರಿಗೆ ಆಗಮಿಸುತ್ತಿರುವುದರಿಂದ ಭದ್ರತೆ ದೃಷ್ಟಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ರಾಯಚೂರು ಮತ್ತು ಯರಗೇರಾದಲ್ಲಿ ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿಯೊಬ್ಬರು, ನಿಯೋಜನೆಗೊಂಡಿರುವ ಪೊಲೀಸರಿಗೆ ಕಾರ್ಯಕ್ರಮದ ವಿವರಣೆ ಮತ್ತು ಇವತ್ತಿನ ಜವಾಬ್ದಾರಿಗಳನ್ನು ವಿವರಿಸುತ್ತಿದ್ದಾರೆ.
ರಾಯಚೂರು, ಜೂನ್ 23: ಶನಿವಾರ ತುಮಕೂರು ಇವತ್ತು ರಾಯಚೂರು, ನಾಳೆ ಯಾವೂರು? ಶನಿವಾರ ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಅವರ 75ನೇ ಹುಟ್ಟುಹಬ್ಬ ಆಚರಣೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇವತ್ತು ರಾಯಚೂರಿಗೆ ಆಗಮಿಸುತ್ತಿದ್ದಾರೆ. ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ₹ 936 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಯನ್ನು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಉದ್ಘಾಟಿಸಲಿದ್ದು ಯರಗೇರಾದಲ್ಲಿ ಒಂದು ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ. ಹಾಗೆಯೇ ರಾಯಚೂರು ವಿಶ್ವವಿದ್ಯಾಲಯದ ಹೆಸರನ್ನು ಮಹರ್ಷಿ ವಾಲ್ಮೀಕಿ ಅಂತ ಮರುನಾಮಕರಣವನ್ನೂ ಗಣ್ಯರು ಮಾಡಲಿದ್ದಾರೆ.
ಇದನ್ನೂ ಓದಿ: RSS, ಬಜರಂಗದಳ ವಿರುದ್ಧ ಟೀಕೆ: ಸಿದ್ದರಾಮಯ್ಯಗೆ ನೋಟಿಸ್ ನೀಡಿದ ಕೋರ್ಟ್!
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos