ಬೆಂಗಳೂರು ಸಿಟಿ ರೌಂಡ್ಸ್​ ಬಳಿಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ

Updated on: May 22, 2024 | 4:27 PM

Siddaramaiah And DK Shivakumar Press Conference Live: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜಂಟಿಯಾಗಿ ಬೆಂಗಳೂರು ಸಿಟಿ ರೌಂಡ್ಸ್ ಹಾಕಿದರು. ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ವೇಳೆ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸಿಎಂ-ಡಿಸಿಎ. ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

ಬೆಂಗಳೂರು, (ಮೇ 22): ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಕಾಂಗ್ರೆಸ್​ ಸರ್ಕಾರಕ್ಕೆ ಒಂದು ವರ್ಷ ತುಂಬಿದೆ. ಆದ್ರೆ, ಸಂಭ್ರಮಾಚರಣೆ ಲೋಕಸಭಾ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಗಳ ಜತೆ ಸಂವಾದದೊಂದಿಗೆ ತಮ್ಮ ಸರ್ಕಾರದ ಒಂದು ವರ್ಷದ ಸಾಧನೆಯನ್ನು ಜನತೆ ಮುಂದೆ ಬಿಚ್ಚಿದ್ದಾರೆ. ಇದೀಗ ರಾಜ್ಯದೆಲ್ಲೆಡೆ ಮುಂಗಾರು ಪೂರ್ವ ಮಳೆ ಸುರಿಯುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹಲವೆಡೆ ಸುರಿದ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮೊನ್ನೆ ಬೆಂಗಳೂರು ಸಿಟಿ ರೌಂಡ್ ಹಾಕಿ ಪರಿಶೀಲನೆ ಮಾಡಿದ್ದರು. ಇದರ ಬೆನ್ನಲ್ಲೇ ಇಂದು (ಮೇ 22) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೀಗ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು
ಗೃಹ ಕಚೇರಿ ಕೃಷ್ಣಾದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಏನೆಲ್ಲಾ ಅಂಶಗಳನ್ನು ಹೇಳಲಿದ್ದಾರೆ ಎನ್ನುವುದನ್ನು ನೇರ ಪ್ರಸಾರದಲ್ಲಿ ನೋಡಿ.

Published on: May 22, 2024 04:25 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More