Siddaramaiah-DK Shivakumar: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ನಡುವಿನ ಅಸಮಾಧಾನಗಳನ್ನು ಕೆಮೆರಾಗಳ ಮುಂದೆ ತೋರ್ಪಡಿಸುತ್ತಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: May 23, 2023 | 1:21 PM

ಖಾದರ್ ನಾಮಪತ್ರ ಸಲ್ಲಿಸಿದ ಬಳಿಕ, ಅವರೊಂದಿಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಜೊತೆಯಾಗಿ ಹೆಜ್ಜೆ ಹಾಕುತ್ತಾ ಸದನದ ಕಡೆ ನಡೆದುಬಂದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ (Dy CM DK Shivakumar) ನಡುವೆ ಶೀತಲ ಸಮರ ಜಾರಿಯಲ್ಲಿರೋದು ಬಹಿರಂಗ ಸತ್ಯ. ಮೊದಲಿಂದಲೂ ಸಿದ್ದರಾಮಯ್ಯ ಕ್ಯಾಂಪಲ್ಲಿ ಗುರುತಿಸಿಕೊಂಡಿರುವ ಎಂಬಿ ಪಾಟೀಲ್ ಅವರೊಂದಿಗೂ ಶಿವಕುಮಾರ್ ಬಾಂಧವ್ಯ ಸರಿ ಇದ್ದಂತಿಲ್ಲ. ಬಿಡಿ, ಅದೇನೇ ಇರಲಿ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ತಮ್ಮ ನಡುವಿನ ಅಸಮಾಧಾನ, ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರಿಸಿಕೊಳ್ಳುತ್ತಿಲ್ಲ. ಈ ವಿಡಿಯೋ ನೋಡಿದರೆ ಅದು ವಿದಿತವಾಗುತ್ತದೆ. ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ (UT Khader) ನಾಮಪತ್ರ ಸಲ್ಲಿಸಿದ ಬಳಿಕ, ಅವರೊಂದಿಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಜೊತೆಯಾಗಿ ಹೆಜ್ಜೆ ಹಾಕುತ್ತಾ ಸದನದ ಕಡೆ ನಡೆದುಬಂದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಗುನಗುತ್ತಾ ಮಾತಾಡುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.