ಆರತಿ ತಟ್ಟೆಗೆ ಸಿಎಂ ಸಿದ್ದರಾಮಯ್ಯ ಜೊತೆ ಜಮೀರ್ ಅಹ್ಮದ್ ಹಾಕಿದ ಹಣ ಎಷ್ಟು ಗೊತ್ತಾ?

ಆರತಿ ತಟ್ಟೆಗೆ ಸಿಎಂ ಸಿದ್ದರಾಮಯ್ಯ ಜೊತೆ ಜಮೀರ್ ಅಹ್ಮದ್ ಹಾಕಿದ ಹಣ ಎಷ್ಟು ಗೊತ್ತಾ?

TV9 Web
| Updated By: ಆಯೇಷಾ ಬಾನು

Updated on: Jun 14, 2023 | 2:17 PM

ಸಹಕಾರ ಇಲಾಖೆಯ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ, ಸಚಿವ ಜಮೀರ್ ಸೇರಿ ಹಲವರು ಭಾಗಿಯಾಗಿದ್ದರು.

ಬೆಂಗಳೂರಿನಲ್ಲಿ ಸಹಕಾರ ಇಲಾಖೆಯ ನೂತನ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಲಾಗಿದೆ. ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ, ಸಚಿವ ಜಮೀರ್ ಸೇರಿ ಹಲವರು ಭಾಗಿಯಾಗಿದ್ದರು. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸುರ್ಜೇವಾಲಾ ಅಧಿಕೃತ ಸಭೆ ನಡೆಸಿಲ್ಲ. ಶಾಸಕರ ಜೊತೆ ಚರ್ಚೆ ಮಾಡಿದ್ದಾರೆ. ಡಿಸಿಎಂ ಪಾಲ್ಗೊಂಡಿದ್ದ ಸಭೆ ಅದು. ಚುನಾವಣೆ ಬಗ್ಗೆ ಚರ್ಚೆ ಮಾಡಲು ಕರೆದ ಸಭೆ ಅದು. ಹೆಚ್​ಡಿ ಕುಮಾರಸ್ವಾಮಿ ಸುಮ್ನೆ ಆರೋಪ ಮಾಡ್ತಾರೆ. ಸುರ್ಜೇವಾಲಾ ಅವರು ಅಧಿಕಾರಿಗಳ ಸಭೆ ಕರೆಯೋಕಾಗುತ್ತಾ? ಅದು ಅಧಿಕಾರಿಗಳ ಸಭೆ ಅಲ್ಲ ಎಂದರು.

ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಯಾರು ಹೊಂದಾಣಿಕೆ ರಾಜಕೀಯ ಮಾಡ್ತಿರೋರು ಅಂತ ಪ್ರತಾಪ್ ಸಿಂಹ ಹೇಳಲಿ. ಯಾರು ಅವರು ಹೊಂದಾಣಿಕೆ ರಾಜಕೀಯ ಮಾಡ್ತಿರೋರು? ತನಿಖೆ ಮಾಡಿಸಿ ಅಂತ ಈ ಪ್ರತಾಪ್ ಸಿಂಹ ಹೇಳಿದ್ನಾ?ಪ್ರತಾಪ್ ಸಿಂಹ ಎಳಸು ಎಂದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.