ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಣ್ಯರು

ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಣ್ಯರು

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 27, 2024 | 1:43 PM

ಕೆಂಪೇಗೌಡ 515 ಜಯಂತಿ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರೆಯದಿರೋದು ವಿವಾದ ಸೃಷ್ಟಿಸಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್ ಇದರಲ್ಲಿ ರಾಜಕಾರಣವೇನೂ ಇಲ್ಲ, ಅಧಿಕಾರಿಗಳು ಪ್ರೊಟೋಕಾಲ್ ಪ್ರಕಾರ ಕಾರ್ಯಕ್ರಮ ನಿರೂಪಿಸಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಇವತ್ತು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ. ರಾಜ್ಯದಾದ್ಯಂತ ಜಯಂತಿಯನ್ನು ಬಹು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ನಗರದಲ್ಲಿ ವಿಧಾನಸೌಧ ಆವರಣದಲ್ಲಿ ಅನೇಕ ಗಣ್ಯರು ಕೆಂಪೇಗೌಡರ ಪ್ರತಿಮೆಗೆ ಪುಷ್ಟನಮನ ಸಲ್ಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪೇಗೌಡ ಪ್ರತಿಮೆಗೆ ಹೂಮಾಲೆ ಹಾಕಿ ಪುಷ್ಪ ನಮನ ಸಲ್ಲಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಖುದ್ದು ಒಕ್ಕಲಿಗ ಸಮುದಾಯದವರಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಕೆಂಪೇಗೌಡ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಅವರ ಬಳಿಕ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಹೆಚ್ ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಮೊದಲಾದವರು ಕೇಂಪೇಗೌಡ ಪ್ರತಿಮೆಗೆ ಗೌರವ ಸಲ್ಲಿಸಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಕೆಂಪೇಗೌಡರ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ, ಎಚ್​ಡಿಕೆಗೆ ಕೋಕ್: ಸರ್ಕಾರದ ವಿರುದ್ಧಒಕ್ಕಲಿಗರ ಸಂಘ ಕಿಡಿ