Karnataka Budget 2025: ಕಟ್ಟಡ ಕಾರ್ಮಿಕರು ಮತ್ತು ಕುಟುಂಬಗಳಿಗೆ ವಿಶೇಷ ನೆರವು ಘೋಷಿಸಿದ ಸಿದ್ದರಾಮಯ್ಯ

Updated on: Mar 07, 2025 | 1:44 PM

ನೋಂದಾಯಿತ ಕಾರ್ಮಿಕನೊಬ್ಬ ಸಹಜ ಸಾವನ್ನಪ್ಪಿದರೆ ಅವನ ಕುಟುಂಬಕ್ಕೆ ನೀಡುವ ಪರಿಹಾರ ಧನವನ್ನು ರೂ. 75,000 ದಿಂದ ರೂ. 1,50,000 ಗಳಿಗೆ ಹೆಚ್ಚಿಸಲಾಗುವುದು ಮತ್ತು ಕಟ್ಟಡ ಕಾಮಗಾರಿ ನಡೆಯುವ ಸ್ಥಳದಲ್ಲಿ ಸಾವನ್ನಪ್ಪಿದರೆ ಸರ್ಕಾರದಿಂದ ಸಿಗುತ್ತಿದ್ದ ಪರಿಹಾರ ಧನವನ್ನು ರೂ. 5ಲಕ್ಷದಿಂದ ರೂ. 8 ಲಕ್ಷ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಬೆಂಗಳೂರು, ಮಾರ್ಚ್ 7: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಮ್ಮ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವಿಶೇಷ ಸೌಲಭ್ಯ ಹಾಗೂ ನೆರವುಗಳ ಘೋಷಣೆ ಮಾಡಿದರು. ಕಾರ್ಮಿಕರ ಮಕ್ಕಳಿಗಾಗಿ 6ನೇ ತರಗತಿಯಿಂದ 12ನೇ ತರಗತಿಯವರಗೆ ಶಾಲೆಗಳನ್ನು ನಿರ್ಮಿಸಿ ಅವುಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಿದ್ದರಾಮಯ್ಯ ಬಜೆಟ್​ನಲ್ಲಿ ಶಿಕ್ಷಣ ಇಲಾಖೆಗೆ ಸಿಂಹಪಾಲು ಅನುದಾನ: ಯಾವ ಇಲಾಖೆ ಎಷ್ಟೆಷ್ಟು ಸಿಕ್ತು? ಇಲ್ಲಿದೆ ವಿವರ