ವ್ಹೀಲ್ ಚೇರ್ನಲ್ಲಿ ಆಗಮಿಸಿ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋಗೆ ಚಾಲನೆ ನೀಡಿದ ಸಿದ್ದರಾಮಯ್ಯ
ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ ಕಾರ್ಯಕ್ರಮವನ್ನು ಉದ್ಘಾಟಿಸುವ ಮೊದಲು ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಕಾನೂನು ಸಚಿವ ಹೆಚ್ ಕೆ ಪಾಟೀಲ್ ಮುಖ್ಯಮಂತ್ರಿಗೆ ಹೂ ಮಾಲೆ ಹಾಕಿದರೆ ಅಧಿಕಾರಿಯೊಬ್ಬರು 12ನೇ ಶತಮಾನದ ಸಮಾಜ ಸುಧಾರಕ, ಸಮಾನತೆಯ ಪ್ರತಿಪಾದಕ ಜಗಜ್ಯೋತಿ ಬಸವಣ್ಣನವರ ಪೋರ್ಟೇರ್ಟ್ ನೀಡಿ ಗೌರವಿಸಿದರು.
ಬೆಂಗಳೂರು, ಫೆ. 26: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ನಗರದ ಖಾಸಗಿ ಹೋಟೆಲೊಂದರಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಸ್ಪೋಗೆ ಚಾಲನೆ ನೀಡಿದರು. ಎರಡು ವಾರಗಳಿಗೂ ಹೆಚ್ಚಿನ ಅವಧಿಯಿಂದ ಮಂಡಿನೋವಿಗೆ ತುತ್ತಾಗಿರುವ ಮುಖ್ಯಮಂತ್ರಿ ವೈದ್ಯರ ಸಲಹೆ ಮೇರೆಗೆ ವ್ಹೀಲ್ ಚೇರ್ ಮೇಲೆ ಕೂತ್ಕೊಂಡೇ ಓಡಾಟ ನಡೆಸಿದ್ದಾರೆ. ಇಲ್ಲಿ ನಡೆದ ಕಾರ್ಯಕ್ರಕಮಕ್ಕೂ ಅವರು ವ್ಹೀಲ್ ಚೇರ್ನಲ್ಲಿ ಅಗಮಿಸಿದರು. ಸಚಿವ ಕೆಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಪರಿಷತ್ ಸದಸ್ಯ ಕೆ ಗೋವಿಂದರಾಜು ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಬಹಿರಂಗ ಪತ್ರ: ಕುತೂಹಲ ಮೂಡಿಸಿದ ನಡೆ
Latest Videos

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
