ಮಂಡ್ಯ ಜಿಲ್ಲೆಯ ಬಂಡೆಬೋಯಿಹಳ್ಳಿಗೆ ಹೆಲಿಕಾಪ್ಟರ್ನಲ್ಲಿ ಅಗಮಿಸಿದ ಸಿಎಂ ಸಿದ್ದರಾಮಯ್ಯ
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಆಗಮಿಸಿದರು. ಜಿಲ್ಲೆಯ ಕೆಆರ್ ಪೇಟೆ ಪೊಲೀಸ್ ವತಿಯಿಂದ ಮುಖ್ಯಮಂತ್ರಿಯವರಿಗೆ ಗೌರವ ರಕ್ಷೆ ನೀಡಲಾಯಿತು. ಕಾರ್ಯಕ್ರಮದ ನಂತರ ಸಿಎಂ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು.
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಶೇಷ ಹೆಲಿಕಾಪ್ಟರೊಂದರಲ್ಲಿ ಮಂಡ್ಯ ಜಿಲ್ಲೆಯ ಕೆಅರ್ ಪೇಟೆ ತಾಲ್ಲೂಕಿನ ಬಂಡೆಬೋಯಿಹಳ್ಳಿ ಗ್ರಾಮಕ್ಕೆ ಆಗಮಿಸಿದರು. ಗ್ರಾಮದ ಹೊರವಲಯದಲ್ಲಿ ನಿರ್ಮಿಸಲಾದ ಹೆಲಿಪ್ಯಾಡ್ ನಲ್ಲಿ ಅವರನ್ನು ಹೊತ್ತ ಚಾಪರ್ ಲ್ಯಾಂಡ್ ಅಗುವುದನ್ನು ದೃಶ್ಯಗಳಲ್ಲಿ ನೋಡಬಹುದು. ನಮ್ಮ ಮಂಡ್ಯ ವರದಿಗಾರ ನೀಡುವ ಮಾಹಿತಿ ಪ್ರಕಾರ ಸಿದ್ದರಾಮಯ್ಯನವರು ಬಂಡಬೋಯಿನಹಳ್ಳಿಯಿಂದ ಕೊಂಚ ದೂರದ ಕೋಡಿಮಾರನಹಳ್ಳಿಯಲ್ಲಿ ಲಕ್ಷ್ಮೀದೇವಿ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮುಡಾ ಹಗರಣಕ್ಕೆ ಸಾಕ್ಷ್ಯ ನೀಡಿದ ಇಡಿ: ಸಿಎಂ ಸಿದ್ದರಾಮಯ್ಯಗೆ ಬಿಗಿಯಾದ ಉರುಳು