ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಚಿತ್ರದುರ್ಗದ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭೇಟಿ ನೀಡಿ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. 115 ವರ್ಷಗಳ ಇತಿಹಾಸ ಹೊಂದಿರುವ ಈ ಜಲಾಶಯಕ್ಕೆ ಕೇಂದ್ರ ಸರ್ಕಾರದಿಂದ ನಿಧಿ ಬಿಡುಗಡೆಗೆ ಮನವಿ ಮಾಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸುಧಾಕರ್ ಮುಂತಾದವರು ಉಪಸ್ಥಿತರಿದ್ದರು.
ಚಿತ್ರದುರ್ಗ, ಜನವರಿ 23: ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಇಂದು ಬಾಗಿನ ಅರ್ಪಿಸಿದರು. ಡಿಸಿಎಂ & ಜಲಸಂಪನ್ಮೂಲ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಾವಿರಾರು ಸಂಖ್ಯೆಯಲ್ಲಿ ಜಿಲ್ಲೆಯ ಜನರು ಕೂಡ ಭಾಗಿಯಾಗಿದ್ದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.