ಮೊಮ್ಮಗನ ಧವನ್ ಜತೆ ಡೊಳ್ಳು ಬಾರಿಸಿದ ಸಿಎಂ ಸಿದ್ದರಾಮಯ್ಯ: ಕನಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Updated on: Sep 20, 2025 | 3:35 PM

ಗದಗ ನಗರದ ಕನಕ ಭವನದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಕನಕೋತ್ಸವ ಕಾರ್ಯಕ್ರಮ ಹಾಗೂ ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಇದೇ ವೇಳೆ ಸಿದ್ದರಾಮಯ್ಯ ಮೊಮ್ಮಗ ಧವನ್ ಕೂಡ ತಾತನ ಜತೆ ಡೊಳ್ಳು ಬಾರಿಸಿದ್ದಾನೆ. ತಾತ ಹಾಗೂ ಮೊಮ್ಮಗ ಡೊಳ್ಳು ಬಾರಿಸುವ ವಿಡಿಯೋ ಇಲ್ಲಿದೆ.

ಗದಗ, ಸೆಪ್ಟೆಂಬರ್ 20: ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ ಹಾಗೂ ರಾಜ್ಯ ಮಟ್ಟದ ಕನಕೋತ್ಸವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಕಾರ್ಯಕ್ರಮಕ್ಕೆ ಮೊಮ್ಮಗ ಧವನ್​ ಜತೆಗೆ ಬಂದ ಸಿದ್ದರಾಮಯ್ಯ ಆತನ ಜತೆ ಡೊಳ್ಳು ಬಾರಿಸಿದರು. ಗದಗ ನಗರದ ಕನಕ ಭವನದಲ್ಲಿ ಕಾರ್ಯಕ್ರಮ ಆಯೋಜನೆಯಾಗಿದ್ದು, ಸಚಿವ ಎಚ್​ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More