ಟಿವಿ9 ಅಭಿಯಾನದ ಫಲಶ್ರುತಿ; ದಿಢೀರನೆ ಬೆಂಗಳೂರಿನ ರಸ್ತೆ ರಿಪೇರಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
ಟಿವಿ9 ಏನ್ ರೋಡ್ ಗುರೂ ಅಭಿಯಾನದ ಪರಿಣಾಮವಾಗಿ ಸಿಎಂ ಸಿದ್ದರಾಮಯ್ಯ ದಿಢೀರನೆ ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಪರಿಶೀಲನೆ ಶುರು ಮಾಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಅಧಿಕೃತ ನಿವಾಸವಾದ ಕಾವೇರಿಯಿಂದ ಹೊರಟ ಸಿದ್ದರಾಮಯ್ಯ ವಿಂಡ್ಸರ್ ಮ್ಯಾನರ್ ಬಳಿಯ ರಸ್ತೆಗೆ ಭೇಟಿ ನೀಡಿ ದುರಸ್ತಿ ಕಾರ್ಯಗಳನ್ನು ಪರಿಶೀಲಿಸಿದರು. ಬಳಿಕ ವಿಬ್ ಗಯಾರ್ ರಸ್ತೆಗೆ ಭೇಟಿ ನೀಡಿ ರಸ್ತೆ ಗುಂಡಿ ಮುಚ್ಚು ಕಾಮಗಾರಿಯನ್ನು ಪರಿಶೀಲನೆ ಮಾಡಿದರು. ಇಂದು ಅನೇಕ ಏರಿಯಾಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 27: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಈ ವೇಳೆ ಅವರು ರಸ್ತೆಗುಂಡಿಗಳ ಬಗ್ಗೆ ಅಧಿಕಾರಿಗಳ ಕಾರ್ಯವನ್ನು ಪರಿಶೀಲಿಸಿದ್ದಾರೆ. ಟಿವಿ9 ಏನ್ ರೋಡ್ ಗುರೂ ಅಭಿಯಾನದ ಪರಿಣಾಮವಾಗಿ ಸಿಎಂ ಸಿದ್ದರಾಮಯ್ಯ ದಿಢೀರನೆ ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಪರಿಶೀಲನೆ ಶುರು ಮಾಡಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಗೆ ತಮ್ಮ ಅಧಿಕೃತ ನಿವಾಸವಾದ ಕಾವೇರಿಯಿಂದ ಹೊರಟ ಸಿದ್ದರಾಮಯ್ಯ ವಿಂಡ್ಸರ್ ಮ್ಯಾನರ್ ಬಳಿಯ ರಸ್ತೆಗೆ ಭೇಟಿ ನೀಡಿ ದುರಸ್ತಿ ಕಾರ್ಯಗಳನ್ನು ಪರಿಶೀಲಿಸಿದರು. ಬಳಿಕ ವಿಬ್ ಗಯಾರ್ ರಸ್ತೆಗೆ ಭೇಟಿ ನೀಡಿ ರಸ್ತೆ ಗುಂಡಿ ಮುಚ್ಚು ಕಾಮಗಾರಿಯನ್ನು ಪರಿಶೀಲನೆ ಮಾಡಿದರು. ಇಂದು ಅನೇಕ ಏರಿಯಾಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಜೊತೆಗೆ ಸಚಿವರಾದ ಕೆಜೆ ಜಾರ್ಜ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್, ತುಷಾರ್ ಗಿರಿನಾಥ್ ಮುಂತಾದವರು ಬೆಂಗಳೂರು ಸಿಟಿ ರೌಂಡ್ಸ್ಗೆ ತೆರಳಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
